ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯ ಅವಧಿಯನ್ನ ಚುನಾವಣಾ ಆಯೋಗ ವಿಸ್ತರಿಸಿದೆ.
ಈ ಸಂಬಂಧ ಹೊಸ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳ (BLO) ಮನೆ-ಮನೆ ಭೇಟಿ ಕಾರ್ಯವನ್ನು ಆಗಸ್ಟ್ 17ರ ವರೆಗೆ ಮುಂದುವರಿಸಲು ಆದೇಶಿಸಿದೆ.


ಆಯೋಗದ ಪರಿಷ್ಕೃತ ವೇಳಾಪಟ್ಟಿಯಂತೆ, ಮತಗಟ್ಟೆಗಳ ತಾರ್ಕಿಕ ಮರುಹೊಂದಾಣಿಕೆ (Rationalisation of Polling Stations) ಕಾರ್ಯವು ಆಗಸ್ಟ್ 18 ರಿಂದ ಆರಂಭವಾಗಲಿದೆ. ಇದೇ ವೇಳೆ, ಕರುಡು ಮತದಾರರ ಪಟ್ಟಿಯನ್ನ ಆಗಸ್ಟ್ 24ರಂದು ಪ್ರಕಟಿಸಲಾಗುತ್ತದೆ. ಕರುಡು ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಹಾಗೂ ಆಕ್ಷೇಪಣೆಗಳನ್ನ ಸಲ್ಲಿಸಲು ಆಗಸ್ಟ್ 24 ರಿಂದ ಸೆಪ್ಟೆಂಬರ್ 23ರ ವರೆಗೆ ಅವಕಾಶ ನೀಡಲಾಗಿದೆ.

ಸಲ್ಲಿಕೆಯಾಗುವ ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಪ್ರಕ್ರಿಯೆ ಆಗಸ್ಟ್ 24 ರಿಂದ ಅಕ್ಟೋಬರ್ 22 ರ ವರೆಗೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಆಯೋಗದ ವೇಳಾಪಟ್ಟಿಯ ಪ್ರಕಾರ ಅಂತಿಮ ಮತದಾರರ ಪಟ್ಟಿಯನ್ನ ಅಕ್ಟೋಬರ್ 10ರಂದು ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿದೆ.


