ತಿರುವನಂತಪುರಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ಅವರನ್ನು ವಜಾಗೊಳಿಸುವಂತೆ ಕೋರಿ ನಿರ್ಣಯವನ್ನು ಕೇರಳ (Kerala) ವಿಧಾನಸಭೆಯು ಸೋಮವಾರ ಅಂಗೀಕರಿಸಿತು.
ಸಿಇಸಿ ಅವರನ್ನು ವಜಾಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಇಂತಹ ನಿರ್ಣಯವನ್ನು ಅಂಗೀಕರಿಸಿದ ದೇಶದ ಮೊದಲ ವಿಧಾನಸಭೆ ಇದಾಗಿದೆ. ಇದನ್ನೂ ಓದಿ: SIR ನಲ್ಲಿ ಅಕ್ರಮ ಆರೋಪ – ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ರಾಹುಲ್ ಗಾಂಧಿ ರಿಟ್ ಅರ್ಜಿ ಸಲ್ಲಿಕೆ
140 ಸದಸ್ಯ ಬಲದ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ವಿ.ಡಿ.ಸತೀಶನ್ ಅವರು ಈ ನಿರ್ಣಯವನ್ನು ಮಂಡಿಸಿದರು. ಇಲ್ಲಿ ಆಡಳಿತಾರೂಢ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟವು 102 ಸದಸ್ಯರ ಬಲವನ್ನು ಹೊಂದಿದೆ. 35 ಸದಸ್ಯರನ್ನು ಹೊಂದಿರುವ ಎಡಪಕ್ಷಗಳು ಕೂಡ ಈ ನಿರ್ಣಯವನ್ನು ಬೆಂಬಲಿಸಿದ ಪರಿಣಾಮವಾಗಿ, ಅದು ಸರ್ವಾನುಮತದಿಂದ ಅಂಗೀಕಾರಗೊಂಡಿತು.
ಜ್ಞಾನೇಶ್ ಕುಮಾರ್ ಅವರನ್ನು ಸಿಇಸಿ ಸ್ಥಾನದಿಂದ ತೆಗೆದುಹಾಕುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದರ ಜೊತೆಗೆ, SIR ಪ್ರಕ್ರಿಯೆಯಲ್ಲಿನ ಅಕ್ರಮಗಳನ್ನು ಸರಿಪಡಿಸುವ ಮೂಲಕ ಮತದಾನದ ಹಕ್ಕುಗಳನ್ನು ಮರುಸ್ಥಾಪಿಸಬೇಕು. ತಪ್ಪಾಗಿ ಕೈಬಿಡಲಾಗಿದೆ ಎಂದು ಆರೋಪಿಸಲಾದ ಎಲ್ಲಾ ಅರ್ಹ ಮತದಾರರ ಮತದಾನದ ಹಕ್ಕುಗಳನ್ನು ತಕ್ಷಣವೇ ಮರುಸ್ಥಾಪಿಸಬೇಕು ಎಂದೂ ಈ ನಿರ್ಣಯವು ಆಗ್ರಹಿಸಿದೆ. ಇದನ್ನೂ ಓದಿ: ಪ್ರತಿಭಟನಾ ತಾಣವನ್ನಲ್ಲ, ಜನರ ಧ್ವನಿಯನ್ನೇ ಹತ್ತಿಕ್ಕುವ ಯತ್ನ: ಕೇಂದ್ರದ ವಿರುದ್ಧ ದೀಪ್ಕೆ ಕಿಡಿ
ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸಮಿತಿಯನ್ನು ಪುನರ್‌ರಚಿಸಬೇಕು. ಅದರಲ್ಲಿ ಪ್ರಧಾನ ಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಅವರನ್ನು ಒಳಗೊಳ್ಳಬೇಕು ಎಂದೂ ಈ ನಿರ್ಣಯವು ಆಗ್ರಹಿಸಿತು.

