ತುಮಕೂರು: ನೀರಿನ ಕಟ್ಟೆಗೆ ಕಾಲು ಜಾರಿ ಬಿದ್ದು ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಗುಬ್ಬಿ ತಾಲೂಕಿನ ಕಡಬ ಬಳಿಯ ವರಣಸಂದ್ರ ಗ್ರಾಮದಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ಕವನ(7), ಯೋಕ್ಷಿತಾ(3) ಎಂದು ಗುರುತಿಸಲಾಗಿದೆ. ಇವರಿಬ್ಬರು ಸಹೋದರಿಯರಾಗಿದ್ದಾರೆ. ನಿನ್ನೆ ಸಂಜೆ ಈ ದುರ್ಘಟನೆ ನಡೆದಿದೆ. ಮನೆ ಬಳಿಯ ಕಟ್ಟೆಗೆ ಕಾಲು ಜಾರಿ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ತಿರುಪತಿಯಲ್ಲಿ ಪ್ರವಾಹ- ಜಲಪಾತದಂತೆ ಧುಮ್ಮಿಕ್ಕುತ್ತಿದೆ ಮಳೆ ನೀರು, ಕೊಚ್ಚಿ ಹೋಗ್ತಿವೆ ವಾಹನಗಳು!
Advertisement
Advertisement
ತಾಯಿ ಮಂಜುಳಾ ಕಟ್ಟೆಯಲ್ಲಿ ಬಟ್ಟೆ ತೊಳೆಯುತ್ತಿದ್ದರು. ಈ ವೇಳೆ ಕವನ, ಯೋಕ್ಷಿತಾ ತಾಯಿ ಬಳಿ ತೆರಳಿದ್ದಾರೆ. ಹೀಗೆ ಹೋದ ಇಬ್ಬರು ಆಟವಾಡುತ್ತಿದ್ದ ಸಂದರ್ಭದಲ್ಲಿ ಕಾಲು ಜಾರಿ ಕಟ್ಟೆಯೊಳಗೆ ಬಿದ್ದಿದ್ದಾರೆ. ಕೂಡಲೇ ಮಕ್ಕಳನ್ನ ಕಾಪಾಡಲು ಮಂಜುಳಾ ತಾನೂ ಕಟ್ಟೆಗೆ ಹಾರಿದ್ದಾರೆ. ಇದನ್ನೂ ಓದಿ: ಸೋನಿಯಾ ಮಗಳು, ಉಪೇಂದ್ರ ಪತ್ನಿ ಹೆಸರು ಪ್ರಿಯಾಂಕಾ ಆದ್ರೆ ಖರ್ಗೆ ಪುತ್ರ ಯಾವ ಪ್ರಿಯಾಂಕ: ಪ್ರತಾಪಸಿಂಹ ಪ್ರಶ್ನೆ
Advertisement
ಇತ್ತ ಇದನ್ನು ಗಮನಿಸಿದ ಸ್ಥಳೀಯರು, ತಾಯಿಯನ್ನು ರಕ್ಷಣೆ ಮಾಡಿದ್ದಾರೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಅತ್ಯಾಚಾರಿಗಳ ಲೈಂಗಿಕ ಶಕ್ತಿಗೆ ಕತ್ತರಿ ಶಿಕ್ಷೆ