ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ (Valmiki Development Corporation Scam) ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು (SIT officals) ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಸಾಯಿತೇಜ ಬಂಧಿತ ಆರೋಪಿ (Accused). ಚನ್ನಗಿರಿಯಲ್ಲಿ ಎಸ್‌ಐಟಿ ಅಧಿಕಾರಿಗಳು ಆರೋಪಿಯನ್ನ ಬಂಧಿಸಿದ್ದಾರೆ. ಮೃತ ಚಂದ್ರಶೇಖರನ್ ಡೆತ್ ನೋಟ್‌ನಲ್ಲಿ ಹೆಸರು ಉಲ್ಲೇಖಿಸಿದ್ದರಿಂದ ಸಾಯಿತೇಜ ಎಂಬಾತನನ್ನ ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಕೇಸ್ – ಪ್ರತ್ಯೇಕ ತನಿಖೆ ಆರಂಭಿಸಿದ ED
Advertisement
Advertisement
ತನಿಖೆ ಆರಂಭಿಸಿದ್ದ ಇಡಿ:
ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಸೋಮವಾರವಷ್ಟೇ ಜಾರಿ ನಿರ್ದೇಶನಾಲಯ ಪ್ರತ್ಯೇಕವಾಗಿ ತನಿಖೆ (ED Investigation) ಆರಂಭಿಸಿತ್ತು. ಹಗರಣ ಸಂಬಂಧ ಈಗಾಗಲೇ ಜೈಲಿನಲ್ಲಿರೋ ಆರೋಪಿಗಳ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯವು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ ಪದ್ಮನಾಭ್ ಮತ್ತು ಪರುಶರಾಮ್ ಇಬ್ಬರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು. ಮತ್ತೊಂದೆಡೆ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ ಕೂಡ ತನ್ನದೇ ಆಯಾಮದಲ್ಲಿ ತನಿಖೆ ನಡೆಸುತ್ತಿದೆ. ಇದನ್ನೂ ಓದಿ: ಜೈಲಿನಲ್ಲಿರುವ ನಟ ದರ್ಶನ್ ಭೇಟಿಗೆ ಯಾರಿಗೂ ಅವಕಾಶವಿಲ್ಲ!
Advertisement
ಒಟ್ಟು 9 ಆರೋಪಿಗಳ ಬಂಧನ:
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಈವರೆಗೆ ಎಸ್‌ಐಟಿಯಿಂದ ಒಟ್ಟು 9 ಜನ ಆರೋಪಿಗಳನ್ನ ಬಂಧಿಸಲಾಗಿದೆ. ಒಟ್ಟು 94 ಕೋಟಿ 73 ಲಕ್ಷ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು, ಈ ಪೈಕಿ ಎಸ್‌ಐಟಿ ಅಧಿಕಾರಿಗಳು 14.5 ಕೋಟಿ ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಜಪಾನ್ ಅನ್ನು ಕಾಡುತ್ತಿದೆ ಮನುಷ್ಯನ ಮಾಂಸ ತಿನ್ನುವ ವೈರಸ್ – ಭಾರತಕ್ಕೂ ಇದೆಯಾ ಆತಂಕ?
Advertisement
ಏನಿದು ಪ್ರಕರಣ?
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಕೆಲದಿನಗಳ ಹಿಂದೆಯಷ್ಟೇ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್, ಮೆಸೇಜ್ ಬಂದಿಲ್ಲ. ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ನಂತರ ಬಹುಕೋಟಿ ಹಗರಣದ ಹಿನ್ನೆಲೆಯಲ್ಲಿ ಸಿಬಿಐ, ಇಡಿ ಸಹ ತನಿಖೆಗೆ ಎಂಟ್ರಿ ಆಗಿದೆ.