ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರಿಗೆ ಕೋರ್ಟ್ (Court) 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು, ಅವರನ್ನ ಪರಪ್ಪನ ಅಗ್ರಹಾರ ಜೈಲಿಗೆ (Parappana Agrahara Jail) ಶಿಫ್ಟ್ ಮಾಡಲಾಗಿದೆ.
ಸೋಮವಾರ ಎಸ್‍ಐಟಿ (SIT) ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಮಧ್ಯಾಹ್ನ 3 ಗಂಟೆ ಹೊತ್ತಿಗೆ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಎಸ್‍ಐಟಿ ಅಧಿಕಾರಿಗಳು ನ್ಯಾಯಾಧೀಶರ ಬಳಿ ಮತ್ತೆ ಕಸ್ಟಡಿಗೆ ಕೇಳದ ಕಾರಣ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಅವರನ್ನು ಒಪ್ಪಿಸಲಾಯಿತು. ನಂತರ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಕೇಸ್ – ಜೂನ್ 24ರ ವರೆಗೆ ಪ್ರಜ್ವಲ್ ರೇವಣ್ಣಗೆ ಜೈಲು!
Advertisement
Advertisement
ಹೊಳೆನರಸೀಪುರದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಇನ್ನೂ ಎರಡು ಪ್ರಕರಣಗಳ ತನಿಖೆ ಬಾಕಿ ಹಿನ್ನೆಲೆ ಪುನಃ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಪ್ರತಿ ಪ್ರಕರಣದ ತನಿಖೆಯನ್ನ ಪ್ರತ್ಯೇಕವಾಗಿ ನಡೆಸುತ್ತಿರುವ ಎಸ್‍ಐಟಿ ಟೀಂ, ಸದ್ಯ ಈಗ ಹೊಳೆನರಸೀಪುರ ಟೌನ್ ಠಾಣೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿತ್ತು. ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಸಂಬಂಧ ಕಳೆದ 14 ದಿನಗಳಿಂದ ಪ್ರಜ್ವಲ್ ವಿಚಾರಣೆ ನಡೆಸಲಾಗಿತ್ತು.
Advertisement
Advertisement
ಇದೇ ವೇಳೆ ವೈದ್ಯಕೀಯ ಪರೀಕ್ಷೆ, ಧ್ವನಿ ಪರೀಕ್ಷೆ ಕೂಡ ನಡೆಸಲಾಗಿತ್ತು. ಬಳಿಕ ಕೃತ್ಯ ಎಸಗಿದ ಸ್ಥಳ ಮಹಜರು ಕೂಡ ನಡೆದಿತ್ತು. ಒಂದು ಪ್ರಕರಣದ ತನಿಖೆಯನ್ನ ಎಸ್‍ಐಟಿ ಬಹುತೇಕ ಪೂರ್ಣಗೊಳಿಸಿದ್ದು, ಮುಂದಿನ 2 ಪ್ರಕರಣಗಳ ತನಿಖೆ ಸಂಬಂಧ ಪ್ರತ್ಯೇಕವಾಗಿ ತನಿಖೆ ಶುರು ಮಾಡಲಿದೆ ಎಂದು ಮೂಲಗಳಿಂದ ತಿಳಿದುಬಂದಿತ್ತು. ಆದರೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದನ್ನೂ ಓದಿ: ಭವಾನಿ ರೇವಣ್ಣಗೆ ಕೊನೆಗೂ ಮಧ್ಯಂತರ ಜಾಮೀನು ಮಂಜೂರು