ಜಾಮೀನು ಸಿಕ್ಕರೂ ರೇವಣ್ಣಗೆ ತಪ್ಪಿಲ್ಲ ಸಂಕಷ್ಟ- ಹೈಕೋರ್ಟ್ ಮೆಟ್ಟಿಲೇರಿದ ಎಸ್‍ಐಟಿ

Public TV
1 Min Read
HD REVANNA PRAJWAL

ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಸಿಕ್ಕರೂ ಮಾಜಿ ಸಚಿವ ಹೆಚ್.ಡಿ ರೇವಣ್ಣ (H.D Revanna) ಅವರಿಗೆ ಕಾನೂನು ಸಂಕಷ್ಟ ತಪ್ಪಿಲ್ಲ.

ಹೌದು. ಜಾಮೀನು ಪಡೆದು ನಿರಾಳವಾಗಿದ್ದ ಹೆಚ್.ಡಿ ರೇವಣ್ಣಗೆ ವಿಶೇಷ ತನಿಖಾ ತಂಡ (SIT) ಶಾಕ್ ನೀಡಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಜಾಮೀನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದೆ. ಇದನ್ನೂ ಓದಿ: ಸಂಸದ ಪ್ರಜ್ವಲ್ ರೇವಣ್ಣ ಪಾಸ್‍ಪೋರ್ಟ್ ರದ್ದು ಮಾಡಲು ಚಿಂತನೆ

ರೇವಣ್ಣ ಜಾಮೀನು ಆದೇಶ ವಜಾ ಮಾಡುವಂತೆ ಹೈಕೋರ್ಟ್‍ಗೆ ಎಸ್‍ಐಟಿ ಅರ್ಜಿ ಅಲ್ಲಿಸಿದೆ. ಹೈಕೋರ್ಟ್‍ನ ಜನಪ್ರತಿನಿಧಿಗಳ ಪೀಠಕ್ಕೆ ಅರ್ಜಿ ಸಲ್ಲಿಸಿದ ಎಸ್‍ಐಟಿ, ಕೆಳ ನ್ಯಾಯಾಲಯದ ಜಾಮೀನು ಆದೇಶ ರದ್ದು ಮಾಡುವಂತೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನಲ್ಲಿ ನಡೆಯುವ ವಾದ-ಪ್ರತಿಪಾದ ತೀವ್ರ ಕುತೂಹಲ ಕೆರಳಿಸಿದೆ.

ಎಸ್‍ಐಟಿ ಪರ ಎಸ್‍ಪಿಪಿ ರವಿ ವರ್ಮಕುಮಾರ್ ಹಾಗೂ ರೇವಣ್ಣ ಪರ ಸಿವಿ ನಾಗೇಶ್ ವಾದ ಮಂಡಿಸುವ ಸಾಧ್ಯತೆಗಳಿವೆ. ಇನ್ನು ಎಸ್‍ಐಟಿ ಹೈಕೋರ್ಟ್‍ಗೆ ಸಲ್ಲಿಸಿರುವ ಅರ್ಜಿಗೆ ರೇವಣ್ಣ ಪರ ವಕೀಲರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Share This Article