ಬೆಂಗಳೂರು: ಮಹಿಳೆಯ ಅಪಹರಣ (Woman Kidnape Case) ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (SIT) ಅಧಿಕಾರಿಗಳು ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಅವರನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆಯಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋದರು. ಇಂದು ವಾದ- ಪ್ರತಿವಾದ ಆಲಿಸಿದ ಕೋರ್ಟ್ ಜಾಮೀನು ಅರ್ಜಿ ನಿರಾಕರಿಸಿತು. ಈ ಮೂಲಕ ರೇವಣ್ಣ ಅವರಿಗೆ ರಿಲೀಫ್ ಸಿಕ್ಕಿಲ್ಲ.
Advertisement
Advertisement
ಇತ್ತ ಅರ್ಜಿ ವಜಾ ಆಗುತ್ತಿದ್ದಂತೆಯೇ ಎಸ್‌ಐಟಿ ಅಧಿಕಾರಿಗಳು ಹೆಚ್.ಡಿ ದೇವೇಗೌಡರ ಮನೆಗೆ ದೌಡಾಯಿಸಿದರು. ಅರ್ಧ ಗಂಟೆಯ ಬಳಿಕ ಮನೆಯಿಂದ ರೇವಣ್ಣ ಅವರು ಹೊರಗಡೆ ಬಂದರು. ಈ ವೇಳೆ ಅಧಿಕಾರಿಗಳು ಮಾಜಿ ಸಚಿವರನ್ನು ಬಂಧಿಸಿ ಕರೆದುಕೊಂಡು ಹೋಗಿದ್ದಾರೆ. ನಂತರ ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ಸಿಐಡಿ ಕಚೇರಿಯಲ್ಲಿ ತನಿಖೆ ನಡೆಸಲಾಗುತ್ತದೆ.
Advertisement
ಎಸ್‌ಐಟಿ ಅಧಿಕಾರಿಗಳು ಮೂರು ನೋಟಿಸ್‌ಗಳನ್ನು ಕೊಟ್ಟರೂ ರೇವಣ್ಣ ಅವರು ಕ್ಯಾರೇ ಅಂದಿರಲಿಲ್ಲ. ಕಳೆದ ಮೂರು ದಿನಗಳಿಂದ ದೇವೇಗೌಡರ ನಿವಾಸದಲ್ಲಿ ಉಳಿದುಕೊಂಡಿದ್ದರು ಎಂಬ ಮಾಹಿತಿ ಸಿಕ್ಕಿದೆ. ಇದನ್ನೂ ಓದಿ: ಮಹಿಳೆಯ ಅಪಹರಣ ಪ್ರಕರಣ- ಹೆಚ್.ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Advertisement
ಪ್ರಕರಣ: ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ರೇವಣ್ಣ ವಿರುದ್ಧ ಸಂತ್ರಸ್ತೆ ಮಗ ದೂರು ದಾಖಲಿಸಿದ್ದರು. ಸಂತ್ರಸ್ತೆ ಪುತ್ರ ರೇವಣ್ಣ ಹಾಗೂ ಸತೀಶ್ ಬಾಬಣ್ಣ ಎಂಬಿಬ್ಬರ ವಿರುದ್ಧ ದೂರು ದಾಖಲಿಸಿದ್ದರು. ದೂರಿನಲ್ಲಿ ಭವಾನಿ ಅಕ್ಕ ಕರೆಯುತ್ತಿದ್ದಾರೆ ಅಂತ ಬಾಬಣ್ಣ ಎಂಬಾತ ಮನೆಗೆ ಬಂದು ನನ್ನ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ. ಅಂದಿನಿಂದ ನನ್ನ ತಾಯಿ ನಾಪತ್ತೆಯಾಗಿದ್ದಾರೆ. ಪೊಲೀಸರು ಕೇಳಿದರೆ ನಮಗೇನು ಗೊತ್ತಿಲ್ಲ ಎಂದು ಹೇಳಿದ್ರು. ಬಳಿಕ ಪೊಲೀಸರ ಮೇಲೆಯೂ ಒತ್ತಡ ಹಾಕಿದ್ರು ಅಂತ ದೂರಿನಲ್ಲಿ ತಿಳಿಸಿದ್ದರು.
ಪ್ರಕರಣ ಸಂಬಂಧ ಈಗಾಗಲೇ ಎ2 ಆರೋಪಿ ಸತೀಶ್ ಬಾಬಣ್ಣನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇತ್ತ ಎ1 ಆರೋಪಿ ಹೆಚ್.ಡಿ ರೇವಣ್ಣ ಕೋರ್ಟ್ ಮೊರೆ ಹೋಗಿದ್ದು, ಇಂದು ಜನಪ್ರತಿನಿಧಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಅರ್ಜಿ ವಜಾಗೊಂಡಿತ್ತು.