ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್‍ಡ್ರೈವ್ ಹಂಚಿದ ಆರೋಪದ ಮೇಲೆ ನವೀನ್ ಗೌಡ ಎಂಬಾತನಿಗೆ ವಿಶೇಷ ತನಿಖಾ ತಂಡ (SIT) ಅಧಿಕಾರಿಗಳು ನೋಟಿಸ್ ಕೊಟ್ಟಿದ್ದಾರೆ.
ಪೆನ್ ಡ್ರೈವ್ ಹಂಚಿಕೆ ಮಾಡಿರುವ ಆರೋಪದ ಮೇಲೆ ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿ ನವೀನ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ನವೀನ್ ಗೌಡನನ್ನ ಎಸ್‍ಐಟಿ ವಿಚಾರಣೆಗೆ ಕರೆದಿದೆ.
Advertisement
Advertisement
ಮೇ.4 ರಂದು ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಲಾಗಿದೆ. ಜೊತೆಗೆ ಖುದ್ದು ಎಸ್‍ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಕರೆ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೂಡ ಕೊಟ್ಟಿದ್ದಾರೆ. ಈಗಾಗಲೇ ನವೀನ್ ಗೌಡ ಫೋನ್‍ನಲ್ಲಿ ಪ್ರಾಥಮಿಕ ಮಾಹಿತಿ ನೀಡಿದ್ದು, ಈ ವೇಳೆ ನಾನು ಪೆನ್‍ಡ್ರೈವ್ ಹಂಚಿಕೆ ಮಾಡಿಲ್ಲ ಎಂದು ಹೇಳಿದ್ದಾನೆ. ಇದನ್ನೂ ಓದಿ: ಮೇ 16ಕ್ಕೆ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ- ಪಬ್ಲಿಕ್ ಟಿವಿಗೆ ಏರ್ ಟಿಕೆಟ್ ಡೀಟೆಲ್ಸ್ ಲಭ್ಯ
Advertisement
Advertisement
ಇತ್ತ ಎ1 ಆರೋಪಿ ರೇವಣ್ಣ ಹಾಗೂ ಎ2 ಆರೋಪಿ ಪ್ರಜ್ವಲ್ ರೇವಣ್ಣಗೂ ತಕ್ಷಣವೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ವೇಳೆ ರೇವಣ್ಣ ಅವರು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು. ಇತ್ತ ಪ್ರಜ್ವಲ್ ರೇವಣ್ಣ ಅವರು ಸಮಯಾವಕಾಶ ಕೇಳಿ ತಮ್ಮ ವಕೀಲರ ಮೂಲಕ ಎಸ್‍ಐಟಿ ಅಧಿಕಾರಿಗಳಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಒಂದು ವಾರ ಸಮಯ ಕೊಡಿ ಎಸ್‍ಐಟಿ ಮುಂದೆ ಹಾಜರಾಗುತ್ತೇನೆ. ಆದಷ್ಟು ಬೇಗ ಸತ್ಯ ಹೊರಗೆ ಬರುತ್ತೆ ಎಂದು ತಮ್ಮ ಫೇಸ್‍ಬುಕ್‍ನಲ್ಲಿಯೂ ಬರೆದುಕೊಂಡಿದ್ದಾರೆ.
ಈ ನಡುವೆ ಇಂದು ಎಸ್‍ಐಟಿ ಅಧಿಕಾರಿಗಳು ಪ್ರಜ್ವಲ್ ವಿರುದ್ಧ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ಜಗತ್ತಿನ ಎಲ್ಲಾ ವಿಮಾನ ನಿಲ್ದಾಣಗಳಿಗೂ ನೋಟಿಸ್ ರವಾನಿಸಲಾಗಿದ್ದು, ಯಾವುದೇ ಕ್ಷಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.