ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ CPI(M) ಪ್ರಧಾನ ಕಾರ್ಯದರ್ಶಿ, ಹಿರಿಯ ರಾಜಕಾರಣಿ ಸೀತಾರಾಮ್ ಯೆಚೂರಿ (Sitaram Yechury) ನಿಧನರಾಗಿದ್ದಾರೆ. ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರು ಆಗಸ್ಟ್ 19 ರಂದು ದೆಹಲಿಯ ಏಮ್ಸ್ ಆಸ್ಪತ್ರಗೆ ದಾಖಲಾಗಿದ್ದರು. ಬೋಧನೆ ಮತ್ತು ಸಂಶೋಧನಾ ಉದ್ದೇಶಗಳಿಗಾಗಿ ಸೀತಾರಾಮ್ ಯೆಚೂರಿ ಅವರ ದೇಹವನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾನ ಮಾಡಿದ್ದಾರೆ ಎಂದು ಏಮ್ಸ್ ಹೇಳಿಕೆಯಲ್ಲಿ ತಿಳಿಸಿದೆ.
ಆಗಸ್ಟ್ 12, 1952 ರಂದು ಚೆನ್ನೈನಲ್ಲಿ ಜನಿಸಿದ ಯೆಚೂರಿ ಅವರು ಭಾರತೀಯ ರಾಜಕೀಯದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದರು. ಸಮ್ಮಿಶ್ರ ರಾಜಕೀಯಕ್ಕೆ ಅವರ ಕಾರ್ಯತಂತ್ರದ ವಿಧಾನ ಮಹತ್ವದಾಗಿದ್ದು, ಮಾರ್ಕ್ಸ್‌ವಾದದ ತತ್ವಗಳಿಗೆ ಅವರ ಅಚಲ ಬದ್ಧತೆಗೆ ಹೆಸರುವಾಸಿಯಾಗಿದ್ದರು. ಇದನ್ನೂ ಓದಿ: Paralympics 2024 | ಭಾರತೀಯ ಕ್ರೀಡಾಪಟುಗಳನ್ನು ಶ್ಲಾಘಿಸಿದ ಮೋದಿ
Advertisement
Advertisement
1974ರಲ್ಲಿ ಎಸ್‌ಎಫ್‌ಐ ಮೂಲಕ ಯೆಚೂರಿಯವರ ರಾಜಕೀಯ ಪಯಣ ಆರಂಭವಾಯಿತು. ಅವರು ಶೀಘ್ರವಾಗಿ ಉನ್ನತ ಮಟ್ಟಕ್ಕೆ ಏರಿದರು. ಮೂರು ಬಾರಿ JNU ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷರಾದರು ಮತ್ತು ನಂತರ SFI ಯ ಅಖಿಲ ಭಾರತ ಅಧ್ಯಕ್ಷರಾದರು. 1984 ರಲ್ಲಿ, ಅವರು ಸಿಪಿಐ(ಎಂ) ಕೇಂದ್ರ ಸಮಿತಿಗೆ ಆಯ್ಕೆಯಾದರು ಮತ್ತು ಶಾಶ್ವತ ಆಹ್ವಾನಿತರಾದರು. 1992 ರ ಹೊತ್ತಿಗೆ, ಅವರು ಪಾಲಿಟ್‌ಬ್ಯೂರೊದ ಸದಸ್ಯರಾದರು.
Advertisement
ಯೆಚೂರಿ ಅವರು 2005 ರಿಂದ 2017 ರವರೆಗೆ ಪಶ್ಚಿಮ ಬಂಗಾಳದಿಂದ ಸಂಸತ್ ಸದಸ್ಯರಾಗಿ, ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದರು. ಪ್ರಕಾಶ್ ಕಾರಟ್ ಬಳಿಕ 2015 ರಲ್ಲಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿಯಾದರು ಮತ್ತು 2018 ಮತ್ತು 2022 ರಲ್ಲಿ ಎರಡು ಬಾರಿ ಸ್ಥಾನಕ್ಕೆ ಮರು ಆಯ್ಕೆಯಾದರು. ಇದನ್ನೂ ಓದಿ: ಕರ್ನಾಟಕ ಹರಿಸಿದ ಹೆಚ್ಚುವರಿ ನೀರು ಲೆಕ್ಕಕ್ಕೆ ಪರಿಗಣಿಸಲು ಸಾಧ್ಯವಿಲ್ಲ – ತಮಿಳುನಾಡು
Advertisement
ಕಾಂಗ್ರೆಸ್ ಸಂಸದ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸೀತಾರಾಮ್ ಯೆಚೂರಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಯೆಚೂರಿ ದೇಶದ ಬಗ್ಗೆ ಆಳವಾದ ತಿಳುವಳಿಕೆಯುಳ್ಳ ಭಾರತದ ಕಲ್ಪನೆಯ ರಕ್ಷಕ ಎಂದು ಕರೆದಿದ್ದಾರೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ಅನುಯಾಯಿಗಳಿಗೆ ನನ್ನ ಪ್ರಾಮಾಣಿಕ ಸಂತಾಪಗಳು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಯೆಚೂರಿ ಅವರ ನಿಧನ ರಾಷ್ಟ್ರ ರಾಜಕೀಯಕ್ಕೆ ತುಂಬಲಾರದ ನಷ್ಟ ಎಂದು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.