– 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಭಯೋತ್ಪಾದನೆ ನಿಯಂತ್ರಣ: ಕಾಶ್ಮೀರ ಜನತೆ
ಶ್ರೀನಗರ: ಲೋಕಸಭಾ ಚುನಾವಣೆ (Lok Sabha Elections 2024) ಸಮೀಪಿಸುತ್ತಿರುವ ಹೊತ್ತಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ಕೋರಲು ಜಮ್ಮು-ಕಾಶ್ಮೀರ ಅಣಿಯಾಗಿದೆ. ಪ್ರಧಾನಿ ಮೋದಿ ಇಂದು (ಗುರುವಾರ) ಕಣಿವೆಗೆ ಭೇಟಿ ನೀಡುತ್ತಿದ್ದು, ಶ್ರೀನಗರದಲ್ಲಿ ಸಾರ್ವಜನಿಕ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
Advertisement
ಜಮ್ಮು-ಕಾಶ್ಮೀರದ ರಾಜಧಾನಿಯಲ್ಲಿ ಮೋದಿ (Narendra Modi) ಚಿತ್ರವಿರುವ ಬೃಹತ್ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಪ್ರಧಾನಿ ಮೋದಿ ಅವರಿಗೆ ಸ್ಥಳೀಯರು ಹೃತ್ಪೂರ್ವಕ ಸ್ವಾಗತ ಕೋರಿದ್ದಾರೆ. ಇದನ್ನೂ ಓದಿ: ಇಡಿ ವಿಚಾರಣೆಗೆ ಗೈರು – ಅರವಿಂದ್ ಕೇಜ್ರಿವಾಲ್‌ಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್
Advertisement
Advertisement
ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ. 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಭಯೋತ್ಪಾದನೆ ನಿಯಂತ್ರಣಕ್ಕೆ ಬಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿಗೆ ಸ್ಥಳೀಯರು ಕೃತಜ್ಞತೆ ಸಲ್ಲಿಸಿದ್ದಾರೆ.
Advertisement
ಆರ್ಟಿಕಲ್ 370 ರದ್ದತಿ (Artical 370) ನಂತರ ಕಾಶ್ಮೀರದ ಸ್ಥಿತಿಯನ್ನು ಬದಲಾಯಿಸಿದ್ದಕ್ಕಾಗಿ ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಜಮ್ಮು ನಿವಾಸಿ ರಾಜೇಂದ್ರ, ಆರ್ಟಿಕಲ್ 370 ರದ್ದತಿ ನಂತರ ಕಾಶ್ಮೀರದಲ್ಲಿ ಪರಿಸ್ಥಿತಿಯು ಶಾಂತಿಯುತವಾಗಿದೆ. ನಾನು ಗುತ್ತಿಗೆದಾರ. ನಾವು ಭಾರತ-ಪಾಕಿಸ್ತಾನದ ಗಡಿಯಲ್ಲಿ ಕೆಲಸ ಮಾಡುತ್ತಿದ್ದೆವು. 370 ನೇ ವಿಧಿಯನ್ನು ರದ್ದುಗೊಳಿಸುವ ಮೊದಲು ಈ ಭಾಗದಲ್ಲಿ ಹಲವಾರು ಸಾವುಗಳು ಸಂಭವಿಸಿವೆ. ನಮ್ಮ ರೈತರು ಶಾಂತಿಯುತವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಗೆಲ್ಲಲು AI ಮೊರೆ ಹೋದ ಮೋದಿ – ವಿಶ್ವದಲ್ಲೇ ಮೊದಲು ಎಂದ ಬಿಜೆಪಿ
ಇಂದು ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಿದೆ. ಮೊದಲು ಪಾಕಿಸ್ತಾನದ ಕಡೆಯಿಂದ ದಾಳಿಗಳು ನಡೆದಾಗ ಜನರು ತಮ್ಮ ಮನೆಗಳನ್ನು ತೊರೆದು ಓಡಿಹೋಗುತ್ತಿದ್ದರು. ಆದರೆ 370 ನೇ ವಿಧಿಯನ್ನು ತೆಗೆದುಹಾಕಿದ ನಂತರ ಇದೆಲ್ಲವೂ ನಿಂತುಹೋಗಿದೆ ಎಂದು ಹೇಳಿದ್ದಾರೆ.
ಕಳೆದ ತಿಂಗಳ ಫೆ.20 ರಂದು ಕಾಶ್ಮೀರಕ್ಕೆ (Jammu Kashmir) ಪ್ರಧಾನಿ ಮೋದಿ ಭೇಟಿ ಕೊಟ್ಟಿದ್ದರು. ಅದಾದ ಎರಡು ವಾರಗಳ ಬಳಿಕ ಇಂದು ಜಮ್ಮುವಿನಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ.