ತಮಿಳು ನಟ ಶಿವ ಕಾರ್ತಿಕೇಯನ್ (Sivakarthikeyan) ಹಾಗೂ ನಟಿ ಸಾಯಿ ಪಲ್ಲವಿ (Sai Pallavi) ನಟನೆಯ ‘ಅಮರನ್’ (Amaran) ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಾಕ್ಸಾಫೀಸ್ ನಲ್ಲೂ ಗಳಿಕೆಯಲ್ಲಿ ಸಖತ್ ಸದ್ದು ಮಾಡ್ತಿದೆ. ಹುತಾತ್ಮರಾದ ಭಾರತೀಯ ಸೇನಾ ಅಧಿಕಾರಿ ಮೇಜರ್ ಮುಕುಂದ್ ವರದರಾಜನ್ ಅವರ ಸ್ಪೂರ್ತಿದಾಯಕ ಕಥೆ ಹೇಳುವ ಬಹುನಿರೀಕ್ಷಿತ ಬಯೋಪಿಕ್‌ಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಅಕ್ಟೋಬರ್ 31ರಂದು ತೆರೆಕಂಡ ‘ಅಮರನ್ ಸಿನಿಮಾ’ ಎಲ್ಲಾ ಕಡೆಗಳಿಂದಲೂ ಮೆಚ್ಚುಗೆಗೆ ಪಾತ್ರವಾಗಿದೆ.
ಸೋನಿ ಪಿಕ್ಚರ್ಸ್ ಸಹಯೋಗದಲ್ಲಿ ನಟ ಕಮಲ್ ಹಾಸನ್ ಅವರ ರಾಜಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಈ ಚಿತ್ರವನ್ನು ನಿರ್ಮಿಸಿದೆ. ಚಿತ್ರದಲ್ಲಿ ಶಿವಕಾರ್ತಿಕೇಯನ್ ಸೇನಾ ಯೋಧನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟಿ ಸಾಯಿ ಪಲ್ಲವಿ ಅದ್ಭುತವಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಮ್ಯೂಸಿಕ್ ಡೈರೆಕ್ಟರ್ ಜಿವಿ ಪ್ರಕಾಶ್ ಕುಮಾರ್ ಸಂಗೀತ ನೀಡಿದ್ದಾರೆ.
ಈ ಚಿತ್ರವು ದಿವಂಗತ ಸೇನಾ ಮೇಜರ್ ಮುಕುಂದ್ ವರದರಾಜನ್ ಅವರ ಜೀವನವನ್ನು ಆಧರಿಸಿದೆ. ಶಿವಕಾರ್ತಿಕೇಯನ್ ಅವರು ಮೇಜರ್ ಮುಕುಂದ್ ಪಾತ್ರದಲ್ಲಿ ಕಾಣಿಸಿಕೊಂಡ್ರೆ. ಪತ್ನಿ ಇಂದೂ ರೆಬೆಕಾ ವರ್ಗೀಸ್ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ಈ ಚಿತ್ರವನ್ನು ರಾಜ್‌ಕುಮಾರ್ ಪೆರಿಯಸಾಮಿ ನಿರ್ದೇಶನ ಮಾಡಿದ್ದಾರೆ. ದೀಪಾವಳಿ ಹಬ್ಬದ ದಿನದಂದು ತಮಿಳು ಸೇರಿದಂತೆ ಬಹುಭಾಷೆಗಳಲ್ಲಿ ‘ಅಮರನ್’ ಎಲ್ಲೆಡೆ ಅಬ್ಬರಿಸುತ್ತಿದ್ದು, ಇದೀಗ ಪ್ರೇಕ್ಷಕರು ಸಿನಿಮಾವನ್ನು ಮೆಚ್ಚಿಕೊಂಡಿದ್ದಕ್ಕೆ ಚಿತ್ರತಂಡದ ಖುಷಿಗೆ ಕಾರಣವಾಗಿದೆ.