ಚಿತ್ರದುರ್ಗ: ನಗರದಲ್ಲಿ ಖಾಸಗಿ ಗಾರ್ಮೆಂಟ್ಸ್ (Private Garments) ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ 6 ಮಂದಿ ಬಾಂಗ್ಲಾ ನುಸುಳುಕೋರರು ಪತ್ತೆಯಾಗಿದ್ದು, ಈ ಪೈಕಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಿತ್ರದುರ್ಗ (Chitradurga) ಡಿವೈಎಸ್ಪಿ ದಿನಕರ್, ಸಿಪಿಐ ಗುಡ್ಡಪ್ಪ, ವೆಂಕಟೇಶ ನೇತೃತ್ವದಲ್ಲಿ ದಾಳಿ ನಡೆದಿದೆ. ಬಳಿಕ ಪೊಲೀಸರು ಪರಿಶೀಲನೆ ಮುಂದುವರಿಸಿ, 15 ಜನ ಶಂಕಿತ ಬಾಂಗ್ಲಾ ನುಸುಳುಕೋರರನ್ನು (Infiltrators) ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ 6 ಮಂದಿ ಬಾಂಗ್ಲಾ ನುಸುಳುಕೋರರು ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಏಕಾಏಕಿ 60,000ಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಶಿಫ್ಟ್ – ಅರ್ಹ ಫಲಾನುಭವಿಗಳು ಕಣ್ಣೀರು
ವಶಕ್ಕೆ ಪಡೆದವರ ಪೈಕಿ ಹೆಚ್ಚಿನವರ ಬಳಿ ಪಶ್ಚಿಮ ಬಂಗಾಳದ ಆಧಾರ್ ಕಾರ್ಡ್ ಪತ್ತೆಯಾಗಿದೆ. ಸದ್ಯ ಕೋಟೆ ಪೊಲೀಸ್ ಠಾಣೆಯಲ್ಲಿ ಚಿತ್ರದುರ್ಗ ಎಸ್ಪಿ ರಂಜಿತ್ ಬಂಡಾರು ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಇನ್ನೂ ಬಾಂಗ್ಲಾ ನುಸುಳುಕೋರರ ಪತ್ತೆಗೆ ಮಂಗಳವಾರವೂ (ನವೆಂಬರ್ 19) ಪೊಲೀಸರ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮರಣದಂಡನೆಗೆ ಗುರಿಯಾದ ರಾಜೋನಾ ಕ್ಷಮಾದಾನ ಅರ್ಜಿ 2 ವಾರದಲ್ಲೇ ಇತ್ಯರ್ಥಗೊಳಿಸಿ: ಸುಪ್ರೀಂ