ಲಕ್ನೋ: ಖಾಸಗಿ ಪೆಟ್ರೋಲ್ ಕೆಮಿಕಲ್ ಕಾರ್ಖಾನೆಯೊಂದರಲ್ಲಿ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ 6 ಜನ ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ನಡೆದಿದೆ.
ಕಾರ್ಮಿಕರಾದ ಕಮಲ್‍ವೀರ್, ಲೋಕೇಂದ್ರ, ರವಿ, ಚೇತ್ರಂ, ವಿಕ್ರಾಂತ್ ಹಾಗೂ ಬಾಲ ಗೋವಿಂದ ಮೃತ ದುರ್ದೈವಿಗಳು. ಘಟನೆಯಲ್ಲಿ ಕಪಿಲ್, ಪರ್ವಿಜ್ ಮತ್ತು ರಾಮ್ ಎನ್ನುವರು ನಾಪತ್ತೆಯಾಗಿದ್ದಾರೆ.
Advertisement
ಈ ಅವಘಡದಲ್ಲಿ 8 ಜನರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಲ್ಲಿ 6 ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ಬಿಜ್ನೋರ್ ಎಸ್‍ಪಿ ಉಮೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
Advertisement
Advertisement
ನಡೆದದ್ದು ಏನು?
ಬುಧವಾರ ಕೊತ್ವಾಲಿ ನಗರದ ನಗಿನಾ ರಸ್ತೆಯ ಮೋಹಿತ್ ಖಾಸಗಿ ಪೆಟ್ರೋಲ್ ಕೆಮಿಕಲ್ ಕಾರ್ಖಾನೆಯಲ್ಲಿ ಕೆಲಸಗಾರರು ಮಿಥೇನ್ ಗ್ಯಾಸ್ ಟ್ಯಾಂಕರ್ ದುರಸ್ತಿ ಮಾಡುತ್ತಿದ್ದರು. ಈ ವೇಳೆ ಬೆಂಕಿ ಕಾಣಿಸಿಕೊಂಡು ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದೆ.
Advertisement
ಟ್ಯಾಂಕರ್ ಸ್ಫೋಟದ ತೀವ್ರತೆಗೆ ಕಾರ್ಮಿಕರ ದೇಹವು ಸುಮಾರು ಮೀಟರ್ ದೂರಕ್ಕೆ ಸಿಡಿದು ಬಿದ್ದಿವೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಮೃತ ಕಾರ್ಮಿಕರ ಕುಟುಂಬದವರು ಹಾಗೂ ಸ್ಥಳೀಯರು ಸೇರಿದಂತೆ ಅನೇಕರು ಘಟನಾ ಸ್ಥಳದಲ್ಲಿ ಸೇರಿದ್ದಾರೆ.
ಸುರಕ್ಷತೆ ಒದಗಿಸದೇ ಕಾರ್ಮಿಕರ ಸಾವಿಗೆ ಕಾರಣವಾದ ಕಂಪೆನಿ ಮಾಲೀಕರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡ ಕಾರ್ಮಿಕರ ಚಿಕಿತ್ಸೆಗೆ ಅವಶ್ಯಕ ವ್ಯವಸ್ಥೆಯನ್ನು ಒದಗಿಸುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭರವಸೆ ನೀಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
#SpotVisuals: Six dead, three critically injured following a cylinder blast in a chemical factory on Bijnor's Nagina road. Police at the spot. pic.twitter.com/OmbETEaKMv
— ANI UP/Uttarakhand (@ANINewsUP) September 12, 2018