ಕತಾರ್: ತಾಂತ್ರಿಕ ದೋಷದಿಂದ ಕತಾರ್ (Qatar) ರಕ್ಷಣಾ ಸಚಿವಾಲಯಕ್ಕೆ ಸೇರಿದ ಹೆಲಿಕಾಪ್ಟರ್ ಪತನಗೊಂಡು (Helicopter Crash) 6 ಮಂದಿ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿರುವ ಘಟನೆ ಕತಾರ್‌ನ ಪ್ರಾದೇಶಿಕ ಜಲಪ್ರದೇಶದಲ್ಲಿ ನಡೆದಿದೆ.
ಭಾನುವಾರ ಮುಂಜಾನೆ ಈ ಘಟನೆ ನಡೆದಿದ್ದು, ಈ ಕುರಿತು ಕತಾರ್ ರಕ್ಷಣಾ ಸಚಿವಾಲಯ ಅಧಿಕೃತ ಮಾಹಿತಿ ನೀಡಿದೆ. ಹೆಲಿಕಾಪ್ಟರ್‌ನಲ್ಲಿ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಉಪ ಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ: ಡಿಕೆಶಿ
Press release regarding the search and rescue operations following the helicopter crash in the country’s territorial waters.#MOIQatar pic.twitter.com/kXVVKA1ocm
— Ministry of Interior – Qatar (@MOI_QatarEn) March 22, 2026
ನಾಪತ್ತೆಯಾಗಿರುವ ಓರ್ವನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಘಟನೆ ಕುರಿತು ಆಂತರಿಕ ಸಚಿವಾಲಯ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದೆ. ಇದನ್ನೂ ಓದಿ: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋಗಳು AI ಅಲ್ಲ, ಅಸಲಿ ಅಂತ SITಯಿಂದ ರಿಪೋರ್ಟ್

