ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ತೀವ್ರ ಗಾಯಗೊಂಡಿದ್ದ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 6ಕ್ಕೆ ಏರಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಲ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ಪಶ್ಚಿಮ ಬಂಗಾಳದ ಐವರು ವಲಸೆ ಕಾರ್ಮಿಕರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು. ಘಟನೆಯಲ್ಲಿ ಕಾರ್ಮಿಕರೊಬ್ಬರು ತೀವ್ರ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇದೀಗ ಆ ಕಾರ್ಮಿಕ ಸಹ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Advertisement
Jammu and Kashmir: 5 non-Kashmiri labourers (from Murshidabad, West Bengal) were killed by terrorists in Kulgam yesterday. pic.twitter.com/oo8YgFsNFE
— ANI (@ANI) October 30, 2019
Advertisement
ಸಂತ್ರಸ್ತರೆಲ್ಲರೂ ಪಶ್ಚಿಮ ಬಂಗಾಳದ ಮಿರ್ಷಿದಾಬಾದ್ ಜಿಲ್ಲೆಯವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ವಲಸಿಗರ ಮೇಲೆ ದಾಳಿ ನಡೆಸಲು ಈಗ ಉಗ್ರರು ಮುಂದಾಗುತ್ತಿದ್ದು, ಕೆಲ ದಿನದ ಹಿಂದೆ ಲಾರಿ ಚಾಲಕರ ಮೇಲೆ ದಾಳಿ ನಡೆಸಿದ್ದರು.
Advertisement
ಇಂದು ಬೆಳಗ್ಗೆ ಸಹ ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್‍ಪಿಎಫ್ ಯೋಧರನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದರು. ಪುಲ್ವಾಮಾದ ಡ್ರಾಬ್‍ಗ್ರಮ್ ಪ್ರದೇಶದಲ್ಲಿ 10ನೇ ತರಗತಿಯ ಬೋರ್ಡ್ ಪರೀಕ್ಷೆ ನಡೆಯುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ್ದರು. ಪರೀಕ್ಷೆಗೆ ತೊಂದರೆಯಾಗದಂತೆ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಸಿಆರ್‍ಪಿಎಫ್ ಯೋಧರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿತ್ತು.
Advertisement
ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಭಾರತೀಯ ಯೋಧರಿಗೆ ಯಾವುದೇ ಪ್ರಾಣಹಾನಿಯಾಗಿಲ್ಲ ಎಂಬ ಮಾಹಿತಿ ಲಭಿಸಿದ್ದು, ಯೋಧರು ಪ್ರತಿದಾಳಿ ನಡೆಸಿದ್ದಾರೆ. ಉಗ್ರರು ಸುಮಾರು 6 ರಿಂದ 7 ಸುತ್ತು ಗುಂಡು ಹಾರಿಸಿದ್ದರು ಎಂಬ ಮಾಹಿತಿ ಲಭಿಸಿದೆ. ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಹೆಚ್ಚಿನ ಸೇನೆಯನ್ನು ಕರೆಯಿಸಿಕೊಂಡಿರುವ ಪೊಲೀಸರು, ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯ ಆರಂಭಗೊಂಡಿದೆ.
West Bengal: Family & friends of the five labourers (who were shot dead by terrorists in Kulgam, Jammu and Kashmir yesterday) in mourning in Murshidabad. pic.twitter.com/oeVbHxubnk
— ANI (@ANI) October 30, 2019
ಯುರೋಪ್‍ನ ಯೂನಿಯನ್ ಸಂಸದರ ತಂಡ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸಮಯದಲ್ಲೇ ಉಗ್ರರು ದಾಳಿ ನಡೆಸಿದ್ದಾರೆ. ಸಂವಿಧಾನದ 370ನೇ ವಿಧಿ ರದ್ದು ಬಳಿಕ ಕಣಿವೆಯ ಪ್ರದೇಶದ ಸ್ಥಿತಿಗತಿ ಬಗ್ಗೆ ತಿಳಿಯಲು ಯುರೋಪಿಯನ್ ಯೂನಿಯನ್ ಸಂಸದರು ಭೇಟಿ ನೀಡಿದ್ದಾರೆ. ಜಮ್ಮು ಕಾಶ್ಮೀರದ ಸೊಪೋರ್ ಬಸ್ ನಿಲ್ದಾಣದಲ್ಲಿ ಸೋಮವಾರ ಗ್ರೇನೇಡ್ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 19ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.