ಬೆಂಗಳೂರು: ಅಂಬುಲೆನ್ಸ್‌ಗೆ ದಾರಿ ಬಿಡದೆ ನಡುರಸ್ತೆಯಲ್ಲೇ ವೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಸಂಚಾರಿ ಪೊಲೀಸರು ಆರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ.
ಜುಲೈ 4ರ ಮಧ್ಯರಾತ್ರಿ ಈ ಘಟನೆ ನಡೆದಿತ್ತು. ಕೆಲ ಯುವಕರು ರಸ್ತೆಯ ಮಧ್ಯೆ ವೀಲಿಂಗ್ ಮಾಡುತ್ತಾ ಅಂಬುಲೆನ್ಸ್‌ಗೂ ದಾರಿ ಬಿಡದೆ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದರು. ಈ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಯಶವಂತಪುರ ಸಂಚಾರಿ ಪೊಲೀಸರು ತನಿಖೆ ನಡೆಸಿ, ವೀಲಿಂಗ್ ಮಾಡಿದ್ದ ಆರು ಅಪ್ರಾಪ್ತರನ್ನು ಗುರುತಿಸಿ ವಶಕ್ಕೆ ಪಡೆದಿದ್ದಾರೆ.ಇದನ್ನೂ ಓದಿ: 11 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಬಂಗಾಳ ಪೊಲೀಸರ ಎನ್‌ಕೌಂಟರ್‌ಗೆ ಆರೋಪಿ ಬಲಿ
ಈ ಪ್ರಕರಣ ಸಂಬಂಧ ಈಗಾಗಲೇ ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಮುಂದುವರಿದಿದೆ.ಇದನ್ನೂ ಓದಿ: ಜರ್ಮನಿಯಲ್ಲಿ ಬೆಚ್ಚಿಬೀಳಿಸಿದ ಟೆಲಿಗ್ರಾಂ ರೇಪ್ ನೆಟ್‌ವರ್ಕ್ – ಮಹಿಳೆಯರಿಗೆ ಡ್ರಗ್ಸ್ ನೀಡಿ ಅತ್ಯಾಚಾರ
