ಗರ್ಭದಲ್ಲಿರುವುದು ಹೆಣ್ಣು ಮಗು ಎಂದು ತಿಳಿದು ಪತ್ನಿಯನ್ನು ಹತ್ಯೆಗೈದ ಪತಿ

Public TV
1 Min Read
husband forced a woman to eat human bones to get pregnant

ಪಟ್ನಾ: ಪತ್ನಿ (Wife) ಹೆಣ್ಣು ಮಗುವಿಗೆ ಜನ್ಮ ನೀಡಲಿದ್ದಾಳೆ ಎಂದು ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮೂಲಕ ತಿಳಿದ ಬಳಿಕ ಆಕೆಯನ್ನು ಪತಿ ಹಾಗೂ ಅತ್ತೆ ಸೇರಿ ಹಲ್ಲೆ ಮಾಡಿ ಹತ್ಯೆ ಮಾಡಿದ ಘಟನೆ ಬಿಹಾರದಲ್ಲಿ ನಡೆದಿದೆ.

ಮೃತ ಮಹಿಳೆಗೆ ಈಗಾಗಲೇ ಒಂದು ಹೆಣ್ಣು ಹಾಗೂ ವಿಕಲಚೇತನ ಗಂಡು ಮಗುವಿದ್ದು, ಮತ್ತೆ ಹೆಣ್ಣು ಮಗುವಿಗೆ ಜನ್ಮ ನೀಡುತ್ತಾಳೆ ಎಂದು ಹತ್ಯೆ ಮಾಡಲಾಗಿದೆ. ಹತ್ಯೆ ಮಾಡಿದ ಬಳಿಕ ಆಕೆ ಆತ್ಮಹತ್ಯೆ ಮಾಡಿಕೊಂಡಂತೆ ಬಿಂಬಿಸಲು ನೇಣು ಬಿಗಿಯಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ ಆಕೆಯ ಪತಿ ಉದಯ್ ಚೌಹಾಣ್ ಹಾಗೂ ಆತನ ತಾಯಿ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರ ಬಂಧನ

ಮಕ್ಕಳು ಅಳುವುದನ್ನು ನೋಡಿ ಸ್ಥಳೀಯರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಬಳಿಕ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು (Police) ಸ್ಥಳವನ್ನು ಪರಿಶೀಲನೆ ನಡೆಸಿ, ಮೃತದೇಹವನ್ನು ಪರಿಕ್ಷೆಗೆ ಕಳಿಸಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

ಮೃತಳ ಸಹೋದರಿ ಈ ಬಗ್ಗೆ ದೂರು ದಾಖಲಿಸಿದ್ದು, ಸ್ಕ್ಯಾನಿಂಗ್‍ನಲ್ಲಿ ಗರ್ಭದಲ್ಲಿ ಹೆಣ್ಣು ಮಗು ಇರುವುದು ಪತ್ತೆಯಾಗಿತ್ತು. ಇದರಿಂದ ಆಕೆಯನ್ನು ಹತ್ಯೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಹೇಮ ಮಾಲಿನಿಯೇ ನೃತ್ಯ ಮಾಡುವಂತೆ ಮಾಡಿದೆ- ವಿವಾದಕ್ಕೀಡಾದ ನರೋತ್ತಮ್ ಮಿಶ್ರಾ ಹೇಳಿಕೆ

Web Stories

Share This Article