-181ಕ್ಕೆ ಏರಿದ ಸೋಂಕಿತರ ಸಂಖ್ಯೆ
ಬೆಂಗಳೂರು: ಕೊರೊನಾ ರಾಜ್ಯದಲ್ಲಿ ಮತ್ತೊಬ್ಬರನ್ನು ಬಲಿ ಪಡೆದುಕೊಂಡಿದ್ದು, ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಕಲಬುರಗಿಯ 65 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಇದು ಎರಡನೇ ಸಾವು ಆಗಿದೆ.
ಇಂದು ಮತ್ತೆ ಆರು ಹೊಸ ಪ್ರಕರಣಗಳು ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 181ಕ್ಕೆ ಏರಿಕೆಯಾಗಿದೆ. ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು, ಉತ್ತರ ಕನ್ನಡ, ತಲಾ ಒಂದು ಪ್ರಕರಣಗಳು ಪತ್ತೆಯಾಗಿದೆ. ಕಲಬುರಗಿಯಲ್ಲಿ ಎರಡು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕಲಬುರಗಿಯಲ್ಲಿ ಮೃತಪಟ್ಟ ವ್ಯಕ್ತಿಗೆ ಕೊರೊನಾ ಸೋಂಕು ಹೇಗೆ ತಗುಲಿದೆ ಎಂಬುದರ ಮಾಹಿತಿ ಇಲ್ಲ. ಸಾವನ್ನಪ್ಪಿದ ವ್ಯಕ್ತಿ ಹಣ್ಣಿನ ವ್ಯಾಪಾರ ಮಾಡಿಕೊಂಡಿದ್ದರು.
Advertisement
ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 6 ಹೊಸ #Covid19 ಪ್ರಕರಣಗಳು ಖಚಿತವಾಗಿತದ್ದು, ಒಟ್ಟಾರೆ ಸಂಖ್ಯೆ 181ಕ್ಕೆ ಏರಿದೆ. ಇಂದಿನವರೆಗೆ 28 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. #IndiaFightsCornona
— B Sriramulu (@sriramulubjp) April 8, 2020
Advertisement
ಗೌರಿಬಿದನೂರಿನಲ್ಲಿ ಮತ್ತೊಂದು ಪಾಸಿಟಿವ್ ಬಂದಿದ್ದು ಈ ಮೂಲಕ ಚಿಕ್ಕಬಳ್ಳಾಪುರದಲ್ಲಿ ಕೊರೊನಾ ಪೀಡಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. 23 ವರ್ಷದ ಯುವಕ ದೆಹಲಿಯ ನಿಜಾಮುದ್ದೀನ್ ಜಮಾತ್ ಗೆ ಹೋಗಿಬಂದಿದ್ದ. ಈಗ ಯುವಕನ ತಾಯಿ, ಯುವಕನ ಅಕ್ಕ ಭಾವ ಇಬ್ಬರು ಮಕ್ಕಳನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ.
Advertisement
Advertisement
ರೋಗಿ 176 – 26 ವರ್ಷದ ಗರ್ಭಿಣಿ ದುಬೈಯಿಂದ ಮರಳಿದ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದರಿಂದ ಕೊರೊನಾ ಬಂದಿದ್ದು, ಉತ್ತರ ಕನ್ನಡದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 177 – 65 ವರ್ಷದ ವ್ಯಕ್ತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 178 – 72 ವರ್ಷದ ಮಹಿಳೆ ರೋಗಿ 175ರ ತಾಯಿಯಾಗಿದ್ದು, ಕಲಬುರಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರೋಗಿ 179 – 35 ವರ್ಷದ ಮಹಿಳೆಯಾಗಿದ್ದು ರೋಗಿ 134 ಮತ್ತು 138ರ ಸಂಪರ್ಕಕ್ಕೆ ಬಂದಿದ್ದು, ಮಂಡ್ಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 180 – 23 ವರ್ಷದ ವ್ಯಕ್ತಿ ದೆಹಲಿ ಪ್ರವಾಸದ ಹಿನ್ನೆಲೆ ಹೊಂದಿದ್ದು, ಚಿಕ್ಕಬಳ್ಳಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
ರೋಗಿ 181 – 27 ವರ್ಷದ ವ್ಯಕ್ತಿ ದೆಹಲಿ ಪ್ರವಾಸದ ಹಿನ್ನೆಲೆಯನ್ನು ಹೊಂದಿದ್ದು, ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ
ಈ ಮೊದಲು ಕಲಬರುಗಿಯ ಹಿರಿಯ ವ್ಯಕ್ತಿ, ಚಿಕ್ಕಬಳ್ಳಾಪುರದ ಮಹಿಳೆ, ತುಮಕೂರಿನ ಹಿರಿಯ ವ್ಯಕ್ತಿ, ಬಾಗಲಕೋಟೆಯ 75 ವರ್ಷದ ವ್ಯಕ್ತಿ ಕೊರೊನಾಗೆ ಮೃತಪಟ್ಟಿದ್ದರು.
6 new positive cases have been reported from 7th April 2020, 5:00 PM to 8th April 2020, 12:00 noon. There are 181 #COVID19 confirmed cases in Karnataka. pic.twitter.com/dOdXlMLnBK
— PublicTV (@publictvnews) April 8, 2020
ಸೋಮವಾರ ಮತ್ತು ಮಂಗಳವಾರ ಎರಡೂ ದಿನ 12 ಪ್ರಕರಣಗಳು ಪತ್ತೆಯಾಗಿದ್ದವು. ಬಾಗಲಕೋಟೆಯಲ್ಲಿ ಸಾವನ್ನಪ್ಪಿದ್ದ ವೃದ್ಧನ ನೆರೆ ಮನೆಯವನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಜಿಲ್ಲೆಯ ಮುಧೋಳ ಪಟ್ಟಣದ ವ್ಯಕ್ತಿಗೆ ಕೊರೊನಾ ತಗುಲಿರೋದು ದೃಢಪಟ್ಟಿತ್ತು.