ಕೊಪ್ಪಳ: ಒಂದೇ ಕುಟುಂಬ ಆರು ಮಂದಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಮೆತಗಲ್ ಗ್ರಾಮದಲ್ಲಿ ನಡೆದಿದೆ.
ಶೇಖರಯ್ಯ ಬೀಡನಾಳ(42), ಪತ್ನಿ ಜಯಮ್ಮ(39), ಮಕ್ಕಳಾದ ಬಸಮ್ಮ(23), ಗೌರಮ್ಮ(20), ಸಾವಿತ್ರಿ(18) ಮತ್ತು ಪಾರ್ವತಿ(16) ಆತ್ಮಹತ್ಯೆಗೆ ಶರಣಾಗಿದ್ದಾರೆ. ಶೇಖರಯ್ಯ ಬೀಡನಾಳ ಶುಕ್ರವಾರ ರಾತ್ರಿ ಪತ್ನಿ ಮತ್ತು ನಾಲ್ವರು ಮಕ್ಕಳಿಗೆ ವಿಷ ಕುಡಿಸಿ ಬಳಿಕ ತಾನು ನೇಣಿಗೆ ಶರಣಾಗಿದ್ದಾನೆ.
ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಇನ್ನೂ ಆತ್ಮಹತ್ಯೆಗೆ ನಿಖರವಾರ ಮಾಹಿತಿ ತಿಳಿದು ಬಂದಿಲ್ಲ.
ಈ ಘಟನೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv