ತಲಪಾಡಿ; ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದು ಬಾಲಕಿ ಸೇರಿ ಆರು ಮಂದಿ ಸಾವು

Public TV
1 Min Read
talapady ksrtc bus accident

ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದು ಬಾಲಕಿ ಸೇರಿ ಆರು ಮಂದಿ ಸಾವನ್ನಪ್ಪಿದ್ದು, 7 ಜನರು ಗಾಯಗೊಂಡಿರುವ ದುರ್ಘಟನೆ ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯಲ್ಲಿ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್‌ ಬ್ರೇಕ್‌ ಫೇಲ್‌ ಆಗಿದೆ. ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ನಿಂತಿದ್ದ ಜನರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅಲ್ಲೇ ನಿಂತಿದ್ದ ಆಟೋಗೂ ಕೂಡ ಬಸ್‌ ಡಿಕ್ಕಿಯಾಗಿದೆ. ಪರಿಣಾಮವಾಗಿ ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ.

ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಹಾಗೂ ಒಬ್ಬ ಬಾಲಕಿ ಸಾವಿಗೀಡಾಗಿದ್ದಾರೆ. ಅಪಘಾತದ ಸಮಯದಲ್ಲಿ ಕೆಲವರು ತುಂಗುದಾಣ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದೊಳಗೆ ಕುಳಿತಿದ್ದರು.

ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article