ಶ್ರೀನಗರ: ಚಾಲಕನ ನಿಯಂತ್ರಣ ತಪ್ಪಿ ಇಕೋ ವಾಹನವೊಂದು ಕಂದಕಕ್ಕೆ ಬಿದ್ದ ಪರಿಣಾಮ ಆರು ಮಂದಿ ಮೃತಪಟ್ಟಿದ್ದಾರೆ. ಈ ಘಟನೆ ಜಮ್ಮು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದಿದೆ.
ಅಬ್ದುಲ್ ಲತೀಫ್ (42), ಅಬ್ದುಲ್ ರೆಹಮಾನ್ (29), ಅತಾ ಮುಹಮ್ಮದ್ (22), ಇನಾಮ್ (45), ಮೊಹಮ್ಮದ್ ಅಖ್ರಾಮ್ (29) ಮತ್ತು ಜಮೀರ್ (18) ಮೃತರಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ರಾಷ್ಟ್ರೀಯ ರೈಫಲ್ಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಇದನ್ನೂ ಓದಿ: 18 ವರ್ಷದಲ್ಲಿಯೇ ಮೊದಲು- ಫೇಸ್ಬುಕ್ಗೆ ಒಂದೇ ದಿನ 16 ಲಕ್ಷ ಕೋಟಿ ರೂ. ನಷ್ಟ
ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಅಪಘಾತ ಸಂಭವಿಸಿದೆ. ವಾಹನ ಕಂದಕಕ್ಕೆ ಬಿದ್ದು, ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಒಬ್ಬ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಬದುಕುಳಿಯಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಚೀನಾ ಒಲಿಂಪಿಕ್ಸ್ಗೆ ಭಾರತ ಬಹಿಷ್ಕಾರ – ದಿಟ್ಟ ನಿರ್ಧಾರ ತೆಗೆದುಕೊಂಡ ಭಾರತೀಯ ವಿದೇಶಾಂಗ ಇಲಾಖೆ