ಜೈಪುರ: ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ (Accident) ಪ್ರಧಾನಿ ಮೋದಿಯವರ (Narendra Modi) ಚುನಾವಣಾ ರ‍್ಯಾಲಿಯ ಭದ್ರತೆಗೆ ನಿಯೋಜಿದ್ದ ಆರು ಜನ ಪೊಲೀಸರು (Police) ಮೃತಪಟ್ಟ ಘಟನೆ ರಾಜಸ್ಥಾನದ (Rajasthan) ಚುರು ಎಂಬಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 58ರಲ್ಲಿ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆರು ಜನ ಪೊಲೀಸರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಮೃತರಾದ ಪೊಲೀಸರನ್ನು ಜುಂಜುನ್‍ನ ನರೇಂದ್ರ ಮೋದಿಯವರ ರ‍್ಯಾಲಿಯ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಇದನ್ನೂ ಓದಿ: ಪ್ರಜ್ಞೆತಪ್ಪಿ ಬಿದ್ದ ಪತ್ನಿಯನ್ನು ನೇಣು ಬಿಗಿದು ಹತ್ಯೆಗೈದ ಪತಿ
ಅಪಘಾತದಲ್ಲಿ ಮೂವರು ಪೊಲೀಸರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಅಪಘಾತದ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಪೊಲೀಸರಿಗಾಗಿ ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ತೀವ್ರ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗುವಂತೆ ಪ್ರಾರ್ಥಿಸುತ್ತೇನೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ಬಲಿ