ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಕುಟುಂಬದ ಆರು ಮಂದಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿ ನಡೆದಿದೆ.
ಮಂಗಳವಾರ ಬೆಳಗ್ಗೆ ಹಲ್ಸಿ ಪೊಲೀಸ್ ಠಾಣೆ ವ್ಯಾಪ್ತಿಯ ಪಿಪ್ರಾ ಗ್ರಾಮದ ಬಳಿ ಸಿಕಂದರಾ-ಶೇಖ್ಪುರ ರಾಷ್ಟ್ರೀಯ ಹೆದ್ದಾರಿ-333ರಲ್ಲಿ ಈ ಅಪಘಾತ ಸಂಭವಿಸಿದ್ದು, ಸಂತ್ರಸ್ತರು ಸಂಬಂಧಿಕರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಪಾಟ್ನಾದಿಂದ ಜಮುಯಿಗೆ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಜ್ಕುಮಾರ್ ರಾವ್ – ಫೋಟೋ ವೈರಲ್
ಸುಶಾಂತ್ ಸಿಂಗ್ ಸಂಬಂಧಿಕರು ಪ್ರಯಾಣಿಸುತ್ತಿದ್ದ ಕಾರಿಗೆ ಎಲ್ಪಿಜಿ ಸಿಲಿಂಡರ್ಗಳನ್ನು ತುಂಬಿದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ ಆರು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಗಾಯಗೊಂಡ ನಾಲ್ವರನ್ನು ಇದೀಗ ಜಮುಯಿ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಲಾಲ್ಜಿತ್ ಸಿಂಗ್, ಅವರ ಇಬ್ಬರು ಮಕ್ಕಳಾದ ಅಮಿತ್ ಶೇಖರ್ ಅಲಿಯಾಸ್ ನೆಮಾನಿ ಸಿಂಗ್ ಮತ್ತು ರಾಮ್ ಚಂದ್ರ ಸಿಂಗ್, ಮಗಳು ಬೇಬಿ ದೇವಿ, ಸೊಸೆ ಅನಿತಾ ದೇವಿ ಮತ್ತು ಚಾಲಕ ಪ್ರೀತಂ ಕುಮಾರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: 10 ತಿಂಗಳ ಕಂದಮ್ಮನ ಮೇಲೆ ಮನೆಕೆಲಸದವನಿಂದ ಅತ್ಯಾಚಾರ
ಲಾಲ್ಜಿತ್ ಸಿಂಗ್ ಅವರು ಹರಿಯಾಣದ ಹಿರಿಯ ಪೊಲೀಸ್ ಅಧಿಕಾರಿ ಓಂ ಪ್ರಕಾಶ್ ಸಿಂಗ್ ಅವರ ಸೋದರ ಮಾವ ಆಗಿದ್ದು, ಓಂ ಪ್ರಕಾಶ್ ಸಿಂಗ್ ಸುಶಾಂತ್ ಸಿಂಗ್ ರಜಪೂತ್ ಅವರ ಸೋದರ ಮಾವ ಆಗಿದ್ದಾರೆ. ಸಂತ್ರಸ್ತರು ಓಂ ಪ್ರಕಾಶ್ ಸಿಂಗ್ ಅವರ ಸಹೋದರಿ ಗೀತಾ ದೇವಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಜಮುಯಿಗೆ ಹಿಂತಿರುಗುತ್ತಿದ್ದಾಗ ಘಟನೆ ಜರುಗಿದೆ.