LatestMain PostNational

ಜಮ್ಮು-ಕಾಶ್ಮೀರದಲ್ಲಿ 6 ಭಯೋತ್ಪಾದಕರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಎರಡು ಪ್ರತ್ಯೇಕ ಕಡೆಗಳಲ್ಲಿ ನಡೆದ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಆರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.

ಈ ಬಗ್ಗೆ ಕಾಶ್ಮೀರದ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ವಿಜಯ್ ಕುಮಾರ್ ಮಾತನಾಡಿ, ದಕ್ಷಿಣ ಕಾಶ್ಮೀರದ ಎರಡು ಜಿಲ್ಲೆಗಳಲ್ಲಿ ಪ್ರತ್ಯೇಕ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ನಿನ್ನೆ ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಹತ್ಯೆಯಾದ ಭಯೋತ್ಪಾದಕರು, ಜೈಶ್-ಎ-ಮೊಹಮ್ಮದ್ ಗುಂಪಿನವರಾಗಿದ್ದರು. ಈ ಕಾರ್ಯಾಚರಣೆಯು ಭದ್ರತಾ ಪಡೆಗಳ ದೊಡ್ಡ ಯಶಸ್ಸು ಎಂದು ಬಣ್ಣಿಸಿದರು.

ಅನಂತ್‌ನಾಗ್‌ನ ನೌಗಾಮ್ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯ ಸಂದರ್ಭದಲ್ಲಿ ಪೊಲೀಸರೊಬ್ಬರು ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅನಂತನಾಗ್‌ನಲ್ಲಿ ನಡೆದ ಕಾರ್ಯಾಚರಣೆಯ ನಂತರ, ನಿರ್ದಿಷ್ಟ ಮಾಹಿತಿಯ ಮೇರೆಗೆ ಕುಲ್ಗಾಮ್ ಜಿಲ್ಲೆಯ ಮಿರ್ಹಾಮಾ ಗ್ರಾಮದಲ್ಲಿ ಕಾರ್ಯಾಚರಣೆ ನಡೆಯಿತು. ಈ ಮಧ್ಯೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಇಂದು 566 ಪ್ರಕರಣ – ಬೆಂಗಳೂರಿನಲ್ಲಿ 400 ಕೇಸ್, 4 ಸಾವು

ಈ ಬಗ್ಗೆ ಕಾಶ್ಮೀರ ವಲಯದ ಪೊಲೀಸರು ಟ್ವೀಟ್ ಮಾಡಿ, ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ ಎಂದು ತಿಳಿಸಿದ್ದರು. ನಂತರ ತಡರಾತ್ರಿಯ ಕಾರ್ಯಾಚರಣೆಯಲ್ಲಿ ಇನ್ನೂ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಖಚಿತಪಡಿಸಿತ್ತು. ಇದನ್ನೂ ಓದಿ: ಯುಪಿ ಸರ್ಕಾರ ನೂತನ ಮುಖ್ಯ ಕಾರ್ಯದರ್ಶಿಯಾಗಿ ದುರ್ಗಾ ಶಂಕರ್ ಮಿಶ್ರಾ ನೇಮಕ

ನಂತರ ಎರಡು ಪ್ರತ್ಯೇಕ ಸ್ಥಳಗಳಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಆರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಇದುವರೆಗೆ ಗುರುತಿಸಲಾಗಿರುವ ನಾಲ್ವರು ಭಯೋತ್ಪಾದಕರ ಪೈಕಿ ಇಬ್ಬರು ಪಾಕಿಸ್ತಾನದವರು. ಇನ್ನಿಬ್ಬರು ಉಗ್ರರು ಎಂದು ಕಾಶ್ಮೀರ ಪೊಲೀಸರ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published.

Back to top button