ಕೀವ್: ಉಕ್ರೇನ್‍ನ ಶಿಶುಪಾಲನಾ ಕೇಂದ್ರ ಸೇರಿದಂತೆ ಅನಾಥಾಶ್ರಮಗಳ ಮೇಲೆ ರಷ್ಯಾ ದಾಳಿ ನಡೆಸಿದ್ದು, 7 ವರ್ಷದ ಬಾಲಕಿ ಸೇರಿದಂತೆ 6 ಮಂದಿ ಸಾವನ್ನಪ್ಪಿದ್ದಾರೆ.
ಉಕ್ರೇನ್‍ನ ಈಶಾನ್ಯ ನಗರದ ಓಖ್ಟಿರ್ಕಾದಲ್ಲಿ ರಷ್ಯಾದ ದಾಳಿ ನಡೆಸಿದ ಪರಿಣಾಮವಾಗಿ ಏಳು ವರ್ಷದ ಬಾಲಕಿ ಸೇರಿದಂತೆ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ ಶಿಶುವಿಹಾರ ಶಾಲೆ ಮತ್ತು ಅನಾಥಾಶ್ರಮದಲ್ಲಿ ಘಟನೆ ನಡೆದಿದೆ ಎಂದು ಗವರ್ನರ್ ಡಿಮಿಟ್ರಿ ಝಿವಿಟ್ಸ್ಕಿ ತಿಳಿಸಿದರು.
ಉಕ್ರೇನ್, ರಷ್ಯಾ ಯುದ್ಧ 4ನೇ ದಿನಕ್ಕೆ ಕಾಲಿಟ್ಟಿದ್ದು, ದಿನೇ ದಿನೇ ಉಗ್ರಸ್ವರೂಪ ಪಡೆದುಕೊಳ್ಳುತ್ತಿದೆ. ಉಕ್ರೇನ್‍ನಲ್ಲಿ ಅಪಾರ ಸಾವು, ನೋವುಗಳು ಆಗುತ್ತಿವೆ. ಈಗ ಶಿಶು ಪಾಲನಾಕೇಂದ್ರ, ಅನಾಥಾಶ್ರಮಗಳ ಮೇಲೆ ರಷ್ಯಾ ಬಾಂಬ್ ದಾಳಿ ನಡೆಸಿದ್ದಾರೆ. ಇದರಲ್ಲಿ ರಷ್ಯಾ ಬಾಂಬ್ ದಾಳಿಗೆ 7 ವರ್ಷದ ಬಾಲಕಿ ಸೇರಿ 6 ಮಂದಿ ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ಅಂತಾರಾಷ್ಟ್ರೀಯ ತನಿಖೆಗೆ ಉಕ್ರೇನ್ ಒತ್ತಾಯಿಸುತ್ತಿದೆ. ಇದನ್ನೂ ಓದಿ: ಯುದ್ಧಪೀಡಿತ ಉಕ್ರೇನ್‍ನಿಂದ ಗ್ರೌಂಡ್ ರಿಪೋರ್ಟ್ ಮಾಡಿದ ವಿದ್ಯಾರ್ಥಿಗಳು
ನಿನ್ನೆ ಬಂಕರ್‌ಗಳಲ್ಲಿ ರಷ್ಯಾ ಬಾಂಬ್ ದಾಳಿಯನ್ನು ನಡೆಸಿತ್ತು. ಇದೀಗ ಶಿಶುಪಾಲನಾ ಕೇಂದ್ರದಲ್ಲಿ ದಾಳಿ ನಡೆಸಿದೆ. ಈ ಮೊದಲು ಕೈವಾದ ಜೂಲಿಯಾನಿ ವಿಮಾನ ನಿಲ್ದಾಣದ ಪಕ್ಕ ರಷ್ಯಾ ಕ್ಷಿಪಣಿ ದಾಳಿ ನಡೆಸಿತ್ತು. ಉಕ್ರೇನ್‍ನ ಹಲವು ಪ್ರದೇಶಗಳನ್ನು ರಷ್ಯಾ ಮಿಲಿಟರಿ ಪಡೆ ಸುತ್ತುವರಿದಿದ್ದು, ಅಲ್ಲಲ್ಲಿ ಬಾಂಬ್‍ಗಳ ದಾಳಿ ನಡೆಯುತ್ತಿದೆ. ಉಕ್ರೇನ್‍ನಲ್ಲಿ ಈವರೆಗೆ 300ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಕರ್ಕಿವ್‍ನಲ್ಲಿ ಗ್ಯಾಸ್ ಪೈಪ್‍ಲೈನ್ ಸ್ಫೋಟಿಸಿದ ರಷ್ಯಾ ಸೇನೆ..!