ಬೆಂಗಳೂರು: ಸತ್ತ ಮನುಷ್ಯನ ಅಸ್ಥಿಪಂಜರ ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಸುಭಾಷ್ ನಗರದಲ್ಲಿ ಪತ್ತೆಯಾಗಿದೆ.
ಸುಭಾಷ್ ನಗರದ ಖಾಸಗಿ ನಿವೇಶನದಲ್ಲಿ ಅಸ್ಥಿಪಂಜರ ಪತ್ತೆಯಾಗಿದ್ದು, ಸುತ್ತಮುತ್ತಲಿನ ಜನರಲ್ಲಿ ಆತಂಕ ಮೂಡಿಸಿದೆ. ಪ್ಲಾಸ್ಟಿಕ್ ಕವರ್ ನಲ್ಲಿ ಮಾನವನ ತಲೆ ಬುರುಡೆ, ಕೈ-ಕಾಲು ಪತ್ತೆಯಾಗಿದ್ದು, ಇದನ್ನು ಮಾಟಮಂತ್ರಕ್ಕೆ ಬಳಸಿರುವ ಶಂಕೆ ವ್ಯಕ್ತವಾಗಿದೆ.
Advertisement
Advertisement
ಯಾರೋ ದುಷ್ಕರ್ಮಿಗಳು ವಾಮಚಾರಕ್ಕೆ ಬಳಸಲು ಹೂತಿಟ್ಟಿದ್ದ ಮೃತ ದೇಹದ ಅಸ್ಥಿಪಂಜರವನ್ನ ಹೊರತೆಗೆದಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದನ್ನು ಕಂಡ ಜನರು ತಕ್ಷಣ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರಿಗೆ ಮಾಹಿತಿ ನೀಡಿದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲವೆಂದು ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ಈ ಘಟನೆ ನೆಲಮಂಗಲ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv