ಲಕ್ನೋ: 6 ವರ್ಷದ ಬಾಲಕಿಯ (Girl) ಭಾಗಶಃ ಅಸ್ಥಿಪಂಜರ ಪತ್ತೆಯಾದ ಘಟನೆ ಉತ್ತರ ಪ್ರದೇಶದ (Uttar Pradesh) ಕಾನ್ಪುರದ (Kanpur) ಗ್ರಾಮವೊಂದರಲ್ಲಿ ನಡೆದಿದೆ.
ಬಾಲಕಿಯನ್ನು ಕೊಲೆ ಮಾಡುವ ಮೊದಲು ಲೈಂಗಿಕ ದೌರ್ಜನ್ಯ ನಡೆಸಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಚಂದ್ರಭಾನ್, ಆತನ ಪತ್ನಿ ಸುಧಾ ಹಾಗೂ ಸಹೋದರ ಸುಲ್ತಾನ್ ಸೇರಿದಂತೆ ಮೂವರು ಶಂಕಿತರನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.
- Advertisement 2
- Advertisement 3
ಬಾಲಕಿಯು ಶನಿವಾರ ಅದೇ ಗ್ರಾಮದಲ್ಲಿರುವ ಚಿಕ್ಕಪ್ಪನ ಮನೆಗೆ ಹೋಗುವುದಾಗಿ ಹೇಳಿ ಹೊರಟಿದ್ದಳು. ಅದಾದ ಬಳಿಕ ಆಕೆ ನಾಪತ್ತೆ ಆಗಿದ್ದಳು. ರಾತ್ರಿ ಎಷ್ಟೇ ಸಮಯವಾದರೂ ಮನೆಗೆ ಬಾಲಕಿಯು ಬಾರದಿದ್ದರಿಂದ ಆಕೆಯ ಪೋಷಕರು ಹುಡುಕಲು ಪ್ರಾರಂಭಿಸಿದ್ದಾರೆ. ಕೊನೆಗೂ ಬಾಲಕಿಯ ಸುಳಿವು ಪತ್ತೆ ಆಗದ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಯುವತಿಯ ಬರ್ಬರ ಹತ್ಯೆ- 16 ಬಾರಿ ಚುಚ್ಚಿ ಕೊಂದ ಪಾಗಲ್ ಪ್ರೇಮಿ!
- Advertisement 4
ಅದಾದ ಬಳಿಕ ಬಾಲಕಿಯ ಶವವು ಆಕೆಯ ಮನೆಯಿಂದ ಸುಮಾರು ಒಂದೂವರೆ ಕಿ.ಮೀ ದೂರದಲ್ಲಿ ಪತ್ತೆಯಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಬಾಡೂಟ ಪಾಲಿಟಿಕ್ಸ್