ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam) ಬುಧವಾರ ನಡೆದ ಭಯೋತ್ಪಾದಕರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಇದೀಗ ಘಟನೆಯಲ್ಲಿ ಭಾಗಿಯಾದ ಮೂವರು ಉಗ್ರರ (Terrorists) ರೇಖಾಚಿತ್ರವನ್ನು ಭದ್ರತಾ ಸಂಸ್ಥೆ ಬಿಡುಗಡೆ ಮಾಡಿದೆ.
ಭದ್ರತಾ ಸಂಸ್ಥೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಈ ಭಯಾನಕ ದಾಳಿಯ ಹಿಂದಿನ ಕ್ರೂರ ಯೋಜನೆಯನ್ನು ಬಯಲು ಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿವೆ. ಇದೀಗ ಪ್ರತ್ಯಕ್ಷದರ್ಶಿಗಳ ಮಾಹಿತಿಯ ಆಧಾರದ ಮೇಲೆ ಶಂಕಿತ ಭಯೋತ್ಪಾದಕರ ರೇಖಾಚಿತ್ರವನ್ನು ಬಿಡಿಸಲಾಗಿದೆ. ಇದನ್ನೂ ಓದಿ: ಮಹಿಳೆಯರಿಂದ ಪುರುಷರನ್ನು ಬೇರ್ಪಡಿಸಿ ಹತ್ಯೆ – 20 ನಿಮಿಷದಲ್ಲಿ ನರಮೇಧ ಮಾಡಿದ್ದು ಹೇಗೆ?
ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಈ ರೇಖಾಚಿತ್ರದಲ್ಲಿ ತೋರಿಸಲಾಗಿರುವ 3 ಶಂಕಿತ ಭಯೋತ್ಪಾದಕರ ಹೆಸರುಗಳು ಎಂದು ಎನ್‌ಐಎ ತಿಳಿಸಿದೆ. ಇದನ್ನೂ ಓದಿ: ಪಹಲ್ಗಾಮ್ ದಾಳಿಯ ಬೆನ್ನಲ್ಲೇ 2 ಭಯೋತ್ಪಾದಕರನ್ನ ಹೊಡೆದುರುಳಿಸಿದ ಸೇನಾ ಪಡೆ
ದಾಳಿಗೆ ಮುನ್ನ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗುತಾಣಗಳನ್ನು ನಿರ್ಮಿಸಿದ್ದರು. ಭಯೋತ್ಪಾದಕರು ಬಾಡಿ ಕ್ಯಾಮೆರಾಗಳನ್ನು ಧರಿಸಿದ್ದರು. ವಿಶೇಷವಾಗಿ ಹೆಲ್ಮೆಟ್ ಅಳವಡಿಸಿದ ಕ್ಯಾಮೆರಾಗಳನ್ನು ಧರಿಸಿ ಕೃತ್ಯವನ್ನು ಸಂಪೂರ್ಣವಾಗಿ ಚಿತ್ರೀಕರಿಸಿದ ವಿಚಾರ ತನಿಖೆಯಲ್ಲಿ ಗೊತ್ತಾಗಿದೆ. ಇದನ್ನೂ ಓದಿ: ಕಲಿಮಾ ಹೇಳದ್ದಕ್ಕೆ ತಂದೆಯ ತಲೆಗೆ ಗುಂಡೇಟು – ಕಣ್ಣೀರಿಟ್ಟ ಪುತ್ರಿ
ಮೂಲಗಳ ಪ್ರಕಾರ ಮೂವರು ಭಯೋತ್ಪಾದಕರು ಪ್ರವಾಸಿಗರನ್ನು ಒಟ್ಟುಗೂಡಿಸಿ ಪುರುಷ ಮತ್ತು ಮಹಿಳಾ ಗುಂಪುಗಳಾಗಿ ವಿಂಗಡಿಸಿದ್ದಾರೆ. ನಂತರ ಅವರ ಧರ್ಮ, ಹೆಸರನ್ನು ಕೇಳಿದ್ದಾರೆ. ಈ ವೇಳೆ ಹಿಂದೂ ಹೆಸರು ಹೇಳಿದವರ ಮೇಲೆ ಶೂಟ್ ಮಾಡಿ ಹತ್ಯೆ ಮಾಡಿದ್ದಾರೆ.