ಮಡಿಕೇರಿ: 1965ರಲ್ಲಿ ಭಾರತ-ಪಾಕ್ (Indo – Pak war 1965) ನಡುವೆ ನಡೆದ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಪ್ರಾಣತೆತ್ತ ಕೊಡಗಿನ ಯೋಧ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆ ತೆರೆಯಮೇಲೆ ಬರಲು ಸಜ್ಜಾಗಿದೆ. ನೈಜ ಘಟನೆಯನ್ನಾಧರಿಸಿದ ʻಸ್ಕೈ ಫೋರ್ಸ್ʼ (Sky Force) ಬಾಲಿವುಡ್ ಸಿನಿಮಾ ಇದೇ ಜ.24 ರಂದು ತೆರೆಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸೈನಿಕರ ತವರು ಜಿಲ್ಲೆ ಕೊಡಗಿನಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.
Advertisement
ಕೊಡಗು ಯೋಧರ (Kodagu Soldier) ಪರಂಪರೆಯ ನಾಡು. ಪ್ರತೀ ಕುಟುಂಬದಲ್ಲಿ ಒಬ್ಬನಾದ್ರೂ ಯೋಧನಾಗಿ ದೇಶ ಸೇವೆ ಮಾಡಬೇಕು ಅನ್ನೋದು ಇಲ್ಲಿನ ಜನರ ಮನೋಭಾವ. ಈ ಪುಣ್ಯ ಭೂಮಿಯಲ್ಲಿ ಹುಟ್ಟಿ ದೇಶಕ್ಕಾಗಿ ಪ್ರಾಣಕೋಡುವ ಯೋಧರು ಕೊಡಗು ಜಿಲ್ಲೆಯಲ್ಲಿ ಇಂದಿಗೂ ಇದ್ದಾರೆ. ಈ ನಡುವೆ 1965ರಲ್ಲಿ ಭಾರತ-ಪಾಕ್ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಬಲಿದಾನಗೈದ ಕೊಡಗಿನ ಯೋಧ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆ ಸಿನಿಮಾ ರೂಪದಲ್ಲಿ ತೆರೆಮೇಲೆ ಬರುತ್ತಿದೆ. ದೇಶಾದ್ಯಂತ ಚಿತ್ರ ಜ.24ರಂದು ರಿಲೀಸ್ ಆಗಲಿದೆ.
Advertisement
Advertisement
ಈ ಚಿತ್ರದಲ್ಲಿ ಪಾಕಿಸ್ತಾನದ ಸರ್ಗೋಧಾ ವಾಯುನೆಲೆ ಮೇಲೆ ಭಾರತೀಯ ವಾಯುಸೇನೆ ವೈಮಾನಿಕ ದಾಳಿ ನಡೆಸಿತು. ಇದು ಭಾರತೀಯ ವಾಯುಪಡೆಯ ಮೊದಲ ಮತ್ತು ಅತ್ಯಂತ ಮಾರಣಾಂತಿಕ ದಾಳಿ ಎಂದು ಪರಿಗಣಿಸಲಾಗಿದೆ. ಚಿತ್ರದಲ್ಲಿ ದೇಶಪ್ರೇಮದ ಜೊತೆಗೆ ಸಾಹಸ ದೃಶ್ಯಗಳಿಗೆ ಆದ್ಯತೆ ನೀಡಲಾಗಿದ್ದು, ಭಾರತೀಯ ವಾಯುಪಡೆಯ ಧೈರ್ಯದ ಪ್ರತೀಕ ಎಂಬಂತೆ ಚಿತ್ರಿಸಲಾಗಿದೆ. 1965ರ ಭಾರತ-ಪಾಕ್ ಯುದ್ಧದಲ್ಲಿ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರು ಬದುಕಿ ಹಿಂದಕ್ಕೆ ಬರುವ ಅವಕಾಶಗಳಿತ್ತು. ಆದರೂ ಜೀವದಮೇಲಿನ ಹಂಗು ತೊರೆದು, ಶತ್ರು ರಾಷ್ಟ್ರ ಪಾಕ್‌ನ ಅತ್ಯಾಧುನಿಕ ಯುದ್ಧವಿಮಾನವನ್ನು ಹೊಡೆದುರುಳಿಸಿ ಹುತಾತ್ಮರಾದರು.
Advertisement
ಈ ಘಟನೆಯು ಹಲವು ವರ್ಷಗಳ ಬಳಿಕ ಪಾಕ್ ಸೇನೆಯ ಅಧಿಕಾರಿಯೊಬ್ಬರನ್ನ ಬಿಬಿಸಿ ಸಂದರ್ಶನ ಮಾಡಿದಾಗ ಬೆಳಕಿಗೆ ಬಂದಿತು. ಶೌರ್ಯ ಮೆರೆದು ಹುತಾತ್ಮರಾದ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರಿಗೆ ಮರಣೋತ್ತರವಾಗಿ ಮಹಾವೀರ ಚಕ್ರ ಪುರಸ್ಕಾರ ನೀಡಲಾಯಿತು. ಇವರ ಸಾಹಸಗಾಥೆಯ ನೈಜ ಘಟನೆಯ ಚಿತ್ರವಾಗಿರುವುದರಿಂದ ಜಿಲ್ಲೆಯ ಜನರು ಹರ್ಷ ವ್ಯಕ್ತ ಪಡಿಸುತ್ತಿದ್ದಾರೆ.
ಅಜ್ಜಮಾಡ ಬಿ.ದೇವಯ್ಯ ಅವರ ಜೀವನಾಧರಿತ ಪುಸ್ತಕ ʻ1965ರ ಯುದ್ಧ ಹಾಗೂ ಮಹಾವೀರʼ ಆಧರಿಸಿ ʻಸ್ಕೈ ಫೋರ್ಸ್ʼ ಚಿತ್ರ ನಿರ್ಮಿಸಲಾಗಿದೆ. ಮ್ಯಾಡಾಕ್ ಫಿಲ್ಕ್ ಮತ್ತು ಜಿಯೋ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ದಿನೇಶ್ ವಿಜನ್, ಅಮರ್ ಕೌಶಿಕ್ ಹಾಗೂ ಜ್ಯೋತಿ ದೇಶಪಾಂಡೆ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಚಿತ್ರದಲ್ಲಿ ಸಂದೀಪ್ ಕೇವಾಲಾನಿ ಹಾಗೂ ಅಭಿಷೇಕ್ ಅನಿಲ್ ಕಪೂರ್ ಜಂಟಿಯಾಗಿ ಸಿನಿಮಾ ನಿರ್ದೇಶಿಸಿದ್ದಾರೆ. ಅಕ್ಷಯ್ ಕುಮಾರ್ (Akshay Kumar) ಹಾಗೂ ವೀರ್ ಪಹಾಡಿಯಾ ಪ್ರಮುಖ ಪಾತ್ರಗಳಲ್ಲಿದ್ದಾರೆ. ಸಾರಾ ಅಲಿ ಖಾನ್, ನಿಮ್ರತ್ ಕೌರ್ ಮತ್ತು ಶರದ್ ಕೇಳ್ಳರ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ಕನ್ನಡದ ಸೂಪರ್ ಹಿಟ್ ಚಿತ್ರ ʻಮುತ್ತಿನಹಾರʼ ನೋಡಿ ರಾಜ್ಯದ ನಾನಾ ಭಾಗದ ನೂರಾರು ಯುವಕರು ಸೈನ್ಯಕ್ಕೆ ಸೇರಲು ಮುಂದಾಗಿದ್ರು.