ಬೆಂಗಳೂರು: ಶುಕ್ರವಾರ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸಾಹಿತಿ ಎಸ್‌ಎಲ್ ಭೈರಪ್ಪನವರ (S L Bhyrappa) ಅಂತ್ಯಕ್ರಿಯೆ ನಡೆಯಲಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿದ್ದಾರೆ.
ಗುರುವಾರ ಬೆಳಗ್ಗೆ 8 ಗಂಟೆಗೆ ರವೀಂದ್ರ ಕಲಾಕ್ಷೇತ್ರಕ್ಕೆ ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಿ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಮಧ್ಯಾಹ್ನ 1 ಘಂಟೆಯ ನಂತರ ಪಾರ್ಥಿವ ಶರೀರವನ್ನು ಮೈಸೂರಿಗೆ (Mysuru) ತೆಗೆದುಕೊಂಡು ಹೋಗಲಾಗುತ್ತದೆ. ಮಧ್ಯಾಹ್ನ 3 ಗಂಟೆಗೆ ಮೈಸೂರಿನ ಕಲಾಮಂದಿರಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಶುಕ್ರವಾರ ಬೆಳಗ್ಗೆ ಸಕಾಲ ಸರ್ಕಾರಿ ಗೌರವದೊಂದಿಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯನವವರು ಮೈಸೂರು ಜಿಲ್ಲಾಡಳಿತಕ್ಕೆ ಈ ಬಗ್ಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು.
ಮೈಸೂರು ಮತ್ತು ಇತರ ಕಡೆಯಲ್ಲಿರುವ ಕುಟುಂಬ ಸದಸ್ಯರು ಈಗ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಗೆ ಬರುತ್ತಿದ್ದಾರೆ. ವಿದೇಶದಲ್ಲಿರುವ ಕುಟುಂಬ ಸದಸ್ಯರು ಬಂದರ ನಂತರ ಮೈಸೂರಿನಲ್ಲಿ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ತೀರ್ಮಾನಿಸಿದ್ದಾರೆ.