ಚಾಮರಾಜನಗರ: ಮಹಿಳೆಗೆ ಕಪಾಳಮೋಕ್ಷ (Slap) ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ವಿ.ಸೋಮಣ್ಣ (V Somanna) ಕ್ಷಮೆ ಯಾಚಿಸಿದ್ದಾರೆ.
Advertisement
45 ವರ್ಷ ಹಲವು ಏಳುಬೀಳು ಕಂಡಿದ್ದೇನೆ. ನಿನ್ನೆಯ ಕಾರ್ಯಕ್ರಮದಲ್ಲಿ ಸಣ್ಣ ಅಪಚಾರವನ್ನು ಮಾಡಿಲ್ಲ. ಪ್ರಾಯಶಃ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಾರೆ ಕ್ಷಮೆ ಯಾಚಿಸುತ್ತೇನೆ, ವಿಷಾದ ವ್ಯಕ್ತಪಡಿಸುತ್ತೇನೆ. ನಿನ್ನೆಯ ಘಟನೆ ಘಟನೆಯೇ ಅಲ್ಲ ಎಂದು ಹೇಳಿದರು. ಇದನ್ನೂ ಓದಿ: ಕಪಾಳಮೋಕ್ಷ ಪ್ರಕರಣಕ್ಕೆ ಟ್ವಿಸ್ಟ್- ಸಚಿವರು ನಂಗೆ ಹೊಡೆದಿಲ್ಲವೆಂದು ಮಹಿಳೆ ಸ್ಪಷ್ಟನೆ
Advertisement
Advertisement
ಹೆಣ್ಣು ಮಗಳು ಪದೇಪದೇ ವೇದಿಕೆ ಮೇಲೆ ಬರುತ್ತಿದ್ದಳು. ತಾಯಿ ಎಷ್ಟು ಸರಿ ಬರುತ್ತೀಯಾ ಅಂತ ವಿಚಾರಿಸಿದೆ. ನಿನ್ನ ಸಮಸ್ಯೆ ಬಗೆಹರಿಸುತ್ತೇನೆ ಎಂದು ಕೈಯಲ್ಲಿ ಪಕ್ಕಕ್ಕೆ ಸರಿಸಿದ್ದೇನೆ ಅಷ್ಟೇ ವಿನಃ ಇನ್ನೇನು ಉದ್ದೇಶ ಇರಲ್ಲಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಮಹಿಳೆಗೆ ಕಪಾಳಮೋಕ್ಷ ಮಾಡಿದ ಸಚಿವ ಸೋಮಣ್ಣ
Advertisement
ಹೆಣ್ಣು ಮಕ್ಕಳ ಬಗ್ಗೆ ಅಪಾರವಾದ ಗೌರವ, ಮಮಕಾರ ಇದೆ. ನಾನು ಕೂಡ ಬಡತನದಿಂದಲೇ ಬಂದವನು. ಆ ಹೆಣ್ಣು ಮಗಳಿಗೆ ಸಹ ಹಕ್ಕು ಪತ್ರ ಕೊಡಿಸಿದ್ದೇನೆ. ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಚಿವರು ತಿಳಿಸಿದರು.