ಕೊಲಂಬೊ: 2 ಪಂದ್ಯಗಳ ಟೆಸ್ಟ್ ಸರಣಿಗಾಗಿ (Test Series) ಶ್ರೀಲಂಕಾ ಪ್ರವಾಸಕ್ಕೆ ತೆರಳಿರುವ ಟೀಂ ಇಂಡಿಯಾ (Team India) ಅಭ್ಯಾಸ ಪಂದ್ಯದಲ್ಲಿ 6 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ.
ಕೊಲಂಬೊದ ಎನ್‌ಸಿಸಿ ಕ್ರೀಡಾಂಗಣದಲ್ಲಿ ನಡೆದ ಮೂರು ದಿನಗಳ ಅಭ್ಯಾಸ ಪಂದ್ಯಕ್ಕೆ ಕೆ.ಎಲ್ ರಾಹುಲ್ (KL Rahul) ಟೀಂ ಇಂಡಿಯಾದ ನಾಯಕತ್ವ ವಹಿಸಿದ್ದರು. ಇದನ್ನೂ ಓದಿ: ವೈಭವ್ ಸೂರ್ಯವಂಶಿ ವಯಸ್ಸು ನಿಜಕ್ಕೂ 15 ವರ್ಷವೇ – ಆಸ್ಟ್ರೇಲಿಯಾ ದಿಗ್ಗಜ ಬೌಲರ್ ಬ್ರೆಟ್ ಲೀ ಪ್ರಶ್ನೆ


ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಶುರು ಮಾಡಿದ್ದ ಶ್ರೀಲಂಕಾ ಮೊದಲ ಇನ್ನಿಂಗ್ಸ್‌ನಲ್ಲಿ 8 ವಿಕೆಟ್ ನಷ್ಟಕ್ಕೆ 363 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಇನ್ನೂ ತನ್ನ ಪಾಲಿನ ಮೊದಲ ಇನ್ನಿಂಗ್ಸ್ ಬ್ಯಾಟ್ ಮಾಡಿದ ಭಾರತ ತಂಡ 6 ವಿಕೆಟ್ ನಷ್ಟಕ್ಕೆ 357 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಇನೇ ಇನ್ನಿಂಗ್ಸ್ ಬ್ಯಾಟ್ ಮಾಡಿದ ಲಂಕಾ 6 ವಿಕೆಟ್ ನಷ್ಟಕ್ಕೆ 200 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಇದರೊಂದಿಗೆ ಭಾರತದ ಗೆಲುವಿಗೆ 207 ರನ್‌ಗಳ ಗುರಿ ನೀಡಿತು.
ಅಲ್ಪಮೊತ್ತದ ಗುರಿ ಬೆನ್ನಟ್ಟಿದ ಭಾರತ ಕೇವಲ 4 ವಿಕೆಟ್ ನಷ್ಟಕ್ಕೆ 214 ರನ್‌ಗಳಿಸಿ ಗೆಲುವು ಸಾಧಿಸಿತು. ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಪರ ಕನ್ನಡಿಗ ದೇವದತ್ ಪಡಿಕಲ್ ಅಜೇಯ 142 ರನ್‌ಗಳನ್ನ ಸಿಡಿಸಿದ್ರೆ, 2ನೇ ಇನ್ನಿಂಗ್ಸ್‌ನಲ್ಲಿ ಯಶಸ್ವಿ ಜೈಸ್ವಾಲ್ 63 ರನ್ ಗಳಿಸಿ ತಂಡದ ಗೆಲುವಿಗೆ ನೆರವಾದ್ರು. ಇದನ್ನೂ ಓದಿ: 2027ರ ಏಕದಿನ ವಿಶ್ವಕಪ್‌ಗೆ ಅರ್ಹತೆ ಗಿಟ್ಟಿಸಿಕೊಂಡ ಅಫ್ಘಾನ್ – 2 ಬಾರಿ ಚಾಂಪಿಯನ್ ವಿಂಡೀಸ್‌ಗೆ ಮುಖಭಂಗ

ಇನ್ನುಳಿದಂತೆ ರಿಷಭ್ ಪಂತ್, ಶುಭಮನ್ ಗಿಲ್, ಧ್ರಯವ್ ಜುರೆಲ್, ರವೀಂದ್ರ ಜಡೇಜಾ, ಕೆ.ಎಲ್ ರಾಹುಲ್ ಅಧಿಕೃತ ಟೆಸ್ಟ್ ಪಂದ್ಯ ಆಡುವುದಕ್ಕೆ ಮುನ್ನ ಈ ಪಂದ್ಯದಲ್ಲಿ ಆಟದ ಅನುಭವ ಪಡೆದುಕೊಂಡರು.
ಆಗಸ್ಟ್ 15 ರಿಂದ 5 ದಿನಗಳ ಕಾಲ ಶ್ರೀಲಂಕಾ ವಿರುದ್ಧ ಭಾರತ ಮೊದಲ ಟೆಸ್ಟ್ ಪಂದ್ಯವನ್ನಾಡಲಿದೆ, ಆ.23 ರಿಂದ 5 ದಿನ 2ನೇ ಟೆಸ್ಟ್ ಪಂದ್ಯವನ್ನಾಡಲಿದೆ. ಇದನ್ನೂ ಓದಿ: ಭೂಮಿ ಖರೀದಿಗೆ ಸಹಾಯ ಕೋರಿದ್ದ ಕ್ರಿಕೆಟಿಗ ರಿಷಭ್ ಪಂತ್‌ಗೆ ಸಿಎಂ ಧಾಮಿ ಭರವಸೆ

