ಚಿಕ್ಕಬಳ್ಳಾಪುರ: ಕೆಂಪೇಗೌಡ ಜಯಂತಿ ವೇಳೆ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಮೇಲೆ ಚಪ್ಪಲಿ ಎಸೆತ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಎಂಟು ಮಂದಿ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.
ಚಿಕ್ಕಬಳ್ಳಾಪುರ (Chikkaballapura) ಸಿವಿಲ್ ಹಾಗೂ ಸಿಜೆಎಂ ನ್ಯಾಯಾಲಯ ಎಂಟು ಆರೋಪಿಗಳಿಗೆ ತಲಾ 1 ಲಕ್ಷ ರೂ. ಬಾಂಡ್ ಮೇಲೆ ಷರತ್ತುಬದ್ಧ ಜಾಮೀನು ನೀಡಿದೆ. ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಅಕ್ಕುಲ ರೆಡ್ಡಿ, ಪ್ರಕಾಶ್, ಜಿ.ಹೆಚ್. ಕೃಷ್ಣ, ರಾಜೇಶ್, ಚಂದನ್, ಶ್ರೀನಿವಾಸ್, ಮುನೇಗೌಡ ಹಾಗೂ ನವೀನ್ ಅವರಿಗೆ ಜಾಮೀನು ದೊರೆತಿದೆ. ಆರೋಪಿ ಸುಮಂತ್ ರೆಡ್ಡಿಗೆ ಮಾತ್ರ ಜಾಮೀನು ಸಿಕ್ಕಿಲ್ಲ. ಇದನ್ನೂ ಓದಿ: ಖಬರ್ದಾರ್ ಕುಮಾರಣ್ಣ, ನಿನ್ನ ಚೇಲಾಗಳಿಗೆ ಹೆದರಲ್ಲ – ಪ್ರದೀಪ್ ಈಶ್ವರ್ ತಿರುಗೇಟು
ಜಾಮೀನು ಆದೇಶದ ಹಿನ್ನೆಲೆಯಲ್ಲಿ ಜಿಲ್ಲಾ ಕಾರಾಗೃಹದಲ್ಲಿರುವ ಎಂಟು ಆರೋಪಿಗಳನ್ನು ಬಿಡುಗಡೆ ಮಾಡಲಾಯಿತು. ಆರೋಪಿಗಳ ಬಿಡುಗಡೆ ವೇಳೆ ಜೈಲು ಬಳಿ ಬೆಂಬಲಿಗರು ಜಮಾಯಿಸಿದ್ದು, ಯಾವುದೇ ಸಂಭ್ರಮಾಚರಣೆ ನಡೆಸದಂತೆ ಪೊಲೀಸರು ಎಚ್ಚರಿಕೆ ನೀಡಿದ್ದರು. ಗುಂಪು ಸೇರುವುದನ್ನು ತಡೆಯಲು ಬೆಂಬಲಿಗರನ್ನು ಸ್ಥಳದಿಂದ ತೆರಳುವಂತೆ ಪೊಲೀಸರು ಸೂಚಿಸಿದರು. ಇದನ್ನೂ ಓದಿ: ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆತ – ನಾಲ್ವರು ಅರೆಸ್ಟ್, 150 ಮಂದಿ ವಿರುದ್ಧ ತನಿಖೆ
