ಚೆನ್ನೈ: ತಮಿಳುನಾಡಿನ ಹಣಕಾಸು ಸಚಿವ ಪಳನಿವೇಲ್ ತ್ಯಾಗ ರಾಜನ್ ಅವರ ಕಾರಿಗೆ ಚಪ್ಪಲಿ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಬಿಜೆಪಿ ಕಾರ್ಯಕರ್ತರನ್ನು ಶನಿವಾರ ಬಂಧಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರ ದಾಳಿಗೆ ಹುತಾತ್ಮರಾದ ರೈಫಲ್‌ಮನ್ ಡಿ ಲಕ್ಷ್ಮಣನ್ ಅವರಿಗೆ ಗೌರವ ಸಲ್ಲಿಸಲು ಸಚಿವರು ಮಧುರೈಗೆ ಬಂದಿದ್ದರು. ಈ ವೇಳೆ ಸಚಿವರ ಕಾರಿಗೆ ಕೆಲವರು ಚಪ್ಪಲಿಗಳನ್ನು ಎಸೆದು ಅಗೌರವ ತೋರಿದ್ದರು.
Advertisement
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದ್ದು, ಐವರೂ ಬಿಜೆಪಿ ಕಾರ್ಯಕರ್ತರು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಿಎಂ ಚಾಲನೆ – ಭವ್ಯ ಭಾರತ ಕಟ್ಟಲು ಯುವಜನತೆ ಸನ್ನದ್ಧರಾಗುವಂತೆ ಕರೆ
Advertisement
Advertisement
ಹುತಾತ್ಮರಿಗೆ ಗೌರವ ಸೂಚಿಸಲು ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಮಲೈ ಕೂಡಾ ಬರುವವರಿದ್ದರು. ಈ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಅವರನ್ನು ಸ್ವಾಗತಿಸಲು ಸ್ಥಳದಲ್ಲಿ ನೆರೆದಿದ್ದರು. ಆದರೆ ಆ ವೇಳೆ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ಸಚಿವ ಆಗಮಿಸಿರುವುದನ್ನು ಕಂಡ ಕಾರ್ಯಕರ್ತರು ಅವರ ಕಾರಿನ ಮೇಲೆ ಚಪ್ಪಲಿಗಳನ್ನು ಎಸೆದು, ಅವರ ವಿರುದ್ಧ ಘೋಷಣೆಗಳನ್ನು ಕೂಗಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ತಿರಂಗಮಯವಾದ ಸುಪ್ರಸಿದ್ಧ ಮುಗಳಖೋಡ ಶ್ರೀಮಠ
Advertisement
ವೈರಲ್ ಆಗಿರುವ ವೀಡಿಯೋ ಒಂದರಲ್ಲಿ ಮಹಿಳೆಯೊಬ್ಬರು ಸಚಿವರ ಕಾರಿಗೆ ಚಪ್ಪಲಿಯನ್ನು ಎಸೆದಿರುವುದು ಕಂಡುಬಂದಿದೆ. ಕಾರಿನ ಮುಂಭಾಗ ಅಳವಡಿಸಲಾಗಿದ್ದ ರಾಷ್ಟ್ರಧ್ವಜದ ಸಮೀಪ ಕಾರಿನ ಗಾಜಿನ ಮೇಲೆ ಚಪ್ಪಲಿ ಬಿದ್ದಿರುವುದು ಕಂಡುಬಂದಿತ್ತು.