ಮುಂಬೈ: ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಸ್ಲಿಪ್ ಆಗಿ ರೈಲಿನ ಅಡಿಗೆ ಸಿಲುಕುತ್ತಿದ್ದ ಮಧ್ಯ ವಯಸ್ಸಿನ ಮಹಿಳೆಯನ್ನು ಪ್ಲಾಟ್ ಫಾರಂ ನಲ್ಲಿದ್ದ ಕೆಲ ಪ್ರಯಾಣಿಕರು ರಕ್ಷಿಸಿದ್ದಾರೆ.
ಈ ಘಟನೆಯು ಬೆಳಗ್ಗೆ ಸುಮಾರು 11:45ಕ್ಕೆ ಮುಂಬೈ ನಗರದ ಕುರ್ಲಾ ನಿಲ್ದಾಣದ ಪ್ಲಾಟ್ ಫಾರಂ 1 ರಲ್ಲಿ ನಡೆದಿದೆ.
ಮಹಿಳೆ ತಮ್ಮ ಮಗನ ಜೊತೆ ಬಂದಿದ್ದರು. ಚಲಿಸುತ್ತಿದ್ದ ರೈಲಲ್ಲಿ ಮೊದಲಿಗೆ ಮಗನನ್ನು ಬೋಗಿಗೆ ಹತ್ತಿಸಿದ್ದಾರೆ. ನಂತರ ತಾವು ಸಹ ಹತ್ತಲು ಹೋದಾಗ ಆಯ ತಪ್ಪಿ ರೈಲಿನ ಮೆಟ್ಟಿಲಿಗೂ ಪ್ಲಾಟ್ ಫಾರಂಗೂ ನಡುವೆ ಇರುವ ಗ್ಯಾಪ್ ಗೆ ಜಾರಿದ್ದಾರೆ. ಇದನ್ನೂ ಓದಿ:ರೈಲಿನಡಿ ಸಿಲುಕುತ್ತಿದ್ದ ಬಾಲಕಿಯನ್ನ ರಕ್ಷಿಸಿದ್ರು ಭಾರತೀಯ ಯೋಧ – ವಿಡಿಯೋ ವೈರಲ್
ಮಹಿಳೆ ಜಾರಿ ರೈಲಿನಡಿ ಸಿಲುಕುವಷ್ಟರಲ್ಲಿಯೇ ಪ್ಲಾಟ್ ಫಾರಂನಲ್ಲಿದ್ದ ಕೆಲವರು ರಕ್ಷಣೆ ಮಾಡಿದ್ದಾರೆ. ಈ ಎಲ್ಲ ದೃಶ್ಯಗಳು ನಿಲ್ದಾಣದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರೈಲಿನಲ್ಲಿ ಹತ್ತಿದ್ದ ಮಹಿಳೆಯ ಮಗನನ್ನು ಆರ್ ಪಿಎಫ್ ಪೊಲೀಸರು ತಾಯಿಯೊಂದಿಗೆ ಸೇರಿಸಿದ್ದಾರೆ.