ಚೆನ್ನೈ: ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಆಕೆಯ ಪೋಷಕರು ಒಪ್ಪದ ಕಾರಣ ತನ್ನ ಪ್ರೇಯಸಿಯ ಕತ್ತು ಸೀಳಿ, ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಅಜಿತ್ ಮತ್ತು ಯುವತಿ ಮೊಬೈಲ್ ಫೋನ್ ರಿಟೇಲ್ ಶೋರೂಮ್‍ನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು, ಈ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರಿತಿಯಾಗಿದೆ. ಆ ಯುವತಿಯ ಪೋಷಕರು ಇವರಿಬ್ಬರ ಸಂಬಂಧವನ್ನು ಒಪ್ಪದೆ ಬೇರೊಬ್ಬ ಪುರುಷನೊಂದಿಗೆ ಆಕೆಯ ಮದುವೆಯನ್ನು ಏರ್ಪಡಿಸಿದ್ದರು. ಇದರಿಂದ ಸಿಟ್ಟಿಗೆದ್ದ ಯುವಕ ಈ ಕೃತ್ಯ ಎಸಗಿದ್ದಾನೆ.
Advertisement
Advertisement
ನಡೆದಿದ್ದೇನು?: ಅಜಿತ್ ತನ್ನ ಪ್ರೇಯಸಿಯನ್ನು ಬೇರೆ ಯುವಕನ ಜೊತೆಗೆ ಮದುವೆ ಮಾಡುತ್ತಾರೆ ಎನ್ನುವ ವಿಚಾರವಾಗಿ ಮನನೊಂದಿದ್ದನು. ಒಂದು ದಿನ ಪ್ರೇಯಸಿಯ ಮನೆಗೆ ಹೋಗಿ ಆಕೆಗೆ ತನ್ನ ಪ್ಲಾನ್ ಹೇಳಿದ್ದಾನೆ. ಆಗ ಆಕೆ ಸಾಯಲು ಒಪ್ಪಿಲ್ಲ. ಇದರಿಂದ ತಾನೇ ಚಾಕುವಿನಿಂದ ಆಕೆಯ ಕುತ್ತಿಗೆ ಸೀಳಿ, ಬಳಿಕ ತಾನು ಕೂಡ ನೇಣು ಬಿಗಿದುಕೊಂಡು ಸಾಯಲು ಯತ್ನಿಸಿದ್ದಾನೆ. ಇದನ್ನೂ ಓದಿ: ಬಿಟ್‌ಕಾಯಿನ್ ಹಗರಣದಲ್ಲಿ ಸಿಎಂ ತಲೆದಂಡ ಪಡೆಯಲಿದೆ: ಪ್ರಿಯಾಂಕ್ ಖರ್ಗೆ
Advertisement
Advertisement
ರೂಮಿನಲ್ಲಿ ಗಲಾಟೆ ಕೇಳಿ ಬಾಗಿಲು ಒಡೆದು ಒಳಗೆ ಬಂದ ಆಕೆಯ ಮನೆಯವರಿಗೆ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ತಮ್ಮ ಮಗಳು ಹಾಗೂ ಅಜಿತ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದನ್ನು ನೋಡಿದ್ದಾರೆ. ತಕ್ಷಣ ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಯುವತಿಯ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ: ಬೊಮ್ಮಾಯಿ ಗರಂ
ಮನೆಗೆ ಬಂದ ಅಜಿತ್ ನೀವು ಯಾರಾದರೂ ನಮ್ಮಿಬ್ಬರ ಮದುವೆ ನಿಲ್ಲಿಸಲು ಪ್ರಯತ್ನಿಸಿದರೆ ಎಲ್ಲರನ್ನೂ ಕೊಲ್ಲುವುದಾಗಿ ಅಜಿತ್ ಬೆದರಿಸಿದ್ದ. ನಂತರ ನಮ್ಮ ಮಗಳ ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ ಎಂದು ಯುವತಿಯ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆದ ನಂತರ ಅಜಿತ್ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.