ಬೆಂಗಳೂರು: ತಾಂತ್ರಿಕ ದೋಷ ಹಿನ್ನೆಲೆ ದಾಸರಹಳ್ಳಿಯ ಫ್ಲೈ ಓವರ್ ರಸ್ತೆ ದುರಸ್ತಿ ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದ್ದು, ಇನ್ನೂ ಒಂದು ವಾರ ನೆಲಮಂಗಲ, ಬೆಂಗಳೂರಿನ ಫ್ಲೈ ಓವರ್ ರಸ್ತೆಯಲ್ಲಿ ಕೆಲಸ ನಡೆಯುವ ಸಾಧ್ಯತೆ ಇದೆ.
ಇತ್ತೀಚೆಗಷ್ಟೇ ದಾಸರಹಳ್ಳಿಯ ದೀಪಕ್ ಬಸ್ ನಿಲ್ದಾಣದ ಬಳಿಯ ಫ್ಲೈ ಓವರ್ ರಸ್ತೆಯಲ್ಲಿ ರೋಪ್ ಕಟ್ ಆಗಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ದುರಸ್ತಿ ಕಾರ್ಯ ಪ್ರಾರಂಭವಾಗಿದೆ. ಇನ್ನೂ ನೆಲಮಂಗಲ – ಬೆಂಗಳೂರು ರಸ್ತೆಯಲ್ಲಿ ಪ್ರತಿನಿತ್ಯ ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ದುರಸ್ತಿ ಕಾರ್ಯ ಮಂದಗತಿಯಿಂದ ನಡೆಯುತ್ತಿರುವುದರಿಂದ ಇನ್ನೂ ಒಂದು ವಾರ ವಾಹನ ಸವಾರರು ಟ್ರಾಫಿಕ್ ದಟ್ಟಣೆ ಅನುಭವಿಸಬೇಕಾದ ಪರಿಸ್ಥಿತಿ ಉಂಟಾಗಿದೆ. ಇದನ್ನೂ ಓದಿ: ಬೆಂಗಳೂರಿಗರೇ ಗಮನಿಸಿ, ಪೀಣ್ಯ ಫ್ಲೈಓವರ್ ಸಂಚಾರ ಬಂದ್ – ಬದಲಿ ಮಾರ್ಗ ಇಲ್ಲಿದೆ
Advertisement
Advertisement
ನವಯುಗ ಟೋಲ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯುತ್ತಿರುವ ನಿಧಾನಗತಿಯಲ್ಲಿ ನಡೆಯುತ್ತಿರುವ ದುರಸ್ತಿ ಕಾರ್ಯದಿಂದಾಗಿ ವಾಹನ ಸವಾರರು ಹೈರಾಣಾಗಿದ್ದಾರೆ. ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಗೊರಗುಂಟೆಪಾಳ್ಯ ವರೆಗಿನ ಫ್ಲೈ ಓವರ್ ರಸ್ತೆಯಲ್ಲಿರುವ ಎಲ್ಲಾ ಕಂಬಗಳನ್ನು ಇಂಜಿನಿಯರ್‌ಗಳು ಪರಿಶೀಲಿಸುತ್ತಿದ್ದಾರೆ. ಇದರಿಂದಾಗಿ ಇನ್ನೂ ಒಂದು ವಾರ ದುರಸ್ತಿ ಕಾರ್ಯ ತಡವಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ವಾಹನ ಸವಾರರೆ ಎಚ್ಚರಿಕೆಯಿಂದ ಸಾಗಬೇಕಿದೆ. ಇದನ್ನೂ ಓದಿ: ಬಸ್ ಅಪಘಾತದಲ್ಲಿ 22 ಮಂದಿ ಸಾವಿಗೆ ಕಾರಣನಾದ ಚಾಲಕನಿಗೆ 190 ವರ್ಷ ಜೈಲು ಶಿಕ್ಷೆ