ಬೆಂಗಳೂರು: ಕರ್ನಾಟಕ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವ, ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ (92) ಅವರು ಮಂಗಳವಾರ ಬೆಳಗ್ಗೆ 3:30ಕ್ಕೆ ವಿಧಿವಶರಾಗಿದ್ದಾರೆ.
ಮಂಗಳವಾರ ನಸುಕಿನ ಜಾವ 2 ಗಂಟೆಗೆ ಕೃಷ್ಣ (SM Krishna) ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಉಸಿರಾಟದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೈದ್ಯರಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದರು. ಕೂಡಲೇ ವೈದ್ಯರ ಮನೆಗೆ ಆಗಮಿಸಿದ್ದರು. ಬೆಳಗ್ಗೆ 3:30ಕ್ಕೆ ವೈದ್ಯರು ಎಸ್ಎಂ ಕೃಷ್ಣ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದರು. ಇಂದು ಬೆಳಗ್ಗೆ ಮನೆಯಿಂದ ಚೆಕಪ್ಗಾಗಿ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬಸ್ಥರು ನಿರ್ಧಾರ ಮಾಡಿದ್ದರು.
Advertisement
ಇಂದು ಇಡೀ ದಿನ ಸದಾಶಿವನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಹುಟ್ಟೂರು ಮದ್ದೂರಿಗೆ ಪಾರ್ಥಿವ ಶರೀರವನ್ನು ಶಿಫ್ಟ್ ಮಾಡಲಾಗುತ್ತದೆ. ಸದಾಶಿವನಗರ ಎಸ್ ಎಂ ಕೃಷ್ಣ ಮನೆ ಬಳಿ ಪೊಲೀಸರ ಅಲರ್ಟ್ ಆಗಿದ್ದು ನಿವಾಸದ ಅಕ್ಕಪಕ್ಕ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸ್ ಭದ್ರತೆ ಕಲ್ಪಿಸಿದ್ದಾರೆ.
Advertisement
Advertisement
ಇತ್ತೀಚೆಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದವ ಕೃಷ್ಣ ಎಸ್.ಸಿ.ಮಲ್ಲಯ್ಯ ಮತ್ತು ತಾಯಮ್ಮ ದಂಪತಿಯ ಪುತ್ರನಾಗಿ ಮೇ 1, 1932ರಲ್ಲಿ ಜನಿಸಿದ್ದರು.
Advertisement
2023ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದ ಇವರು ವಿಧಾನಸಭೆ ಸ್ಪೀಕರ್, ಉಪಮುಖ್ಯಮಂತ್ರಿ, ವಿದೇಶಾಂಗ ವ್ಯವಹಾರಗಳ ಸಚಿವ ಹಾಗೂ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.
2017 ರಲ್ಲಿ ಕಾಂಗ್ರೆಸ್ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದ ಕೃಷ್ಣ 2017ರಲ್ಲೇ ಬಿಜೆಪಿಗೆ ಸೇರಿದ್ದರು. 2023ರ ಜನವರಿ 7 ರಂದು ಕೃಷ್ಣ ಅವರು ತಮ್ಮ 60 ವರ್ಷಗಳ ಸುರ್ಧೀಘ ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಣೆ ಮಾಡಿದ್ದರು.