ರಾಯಚೂರು: ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಯೋಜನೆಯನ್ನು ಎಸ್‌ಎಂ ಕೃಷ್ಣ (SM Krishna) ಅವರು ರಾಯಚೂರಿನಲ್ಲಿ (Raichuru) ಮೊದಲ ಬಾರಿಗೆ ಉದ್ಘಾಟಿಸಿದರು.
ಮಾಜಿ ಸಿಎಂ ಎಸ್.ಎಂ ಕೃಷ್ಣ (SM Krishna) ರಾಜ್ಯದಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಯೋಜನೆಯನ್ನು ಜಾರಿಗೆ ತಂದರು. ಈ ಮೂಲಕ ಮೊದಲ ಬಾರಿಗೆ ರಾಯಚೂರು ಜಿಲ್ಲೆಯ ದೇವದುರ್ಗ (Devadruga) ತಾಲ್ಲೂಕಿನ ಅರಕೇರಾದಲ್ಲಿ (Arakera) ಬಿಸಿಯೂಟ ಯೋಜನೆಗೆ ಚಾಲನೆ ನೀಡಿದರು.ಇದನ್ನೂ ಓದಿ: ಒಬ್ಬ ದೂರದೃಷ್ಟಿ ನಾಯಕನನ್ನು ಕಳೆದುಕೊಂಡಿದೆ ಭಾರತ – ಪ್ರಹ್ಲಾದ್ ಜೋಶಿ ಸಂತಾಪ
Advertisement
Advertisement
2001ರಲ್ಲಿ ಆಗಿನ ಸಿಎಂ ಆಗಿದ್ದ ಎಸ್‌ಎಂ ಕೃಷ್ಣ ಅವರು ಮೊದಲ ಹಂತದಲ್ಲಿ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಅತ್ಯಂತ ಹಿಂದುಳಿದ ಏಳು ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಆರಂಭಿಸಿದರು. ಸರ್ಕಾರಿ ಶಾಲೆಗಳ 1 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಲು ಯೋಜನೆ ಹಾಕಿಕೊಂಡಿದ್ದರು. ಬಳಿಕ 2001ರ ನ.09 ರಂದು ಅರಕೇರಾದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆ ಮಾಡಿದರು.
Advertisement
ಸಿಎಂ ಎಸ್.ಎಂ ಕೃಷ್ಣ ಅವರಿಗೆ ಅಂದಿನ ಶಿಕ್ಷಣ ಸಚಿವ ಹೆಚ್.ವಿಶ್ವನಾಥ್, ರಾಯಚೂರು ಸಂಸದ ವೆಂಕಟೇಶ ನಾಯಕ ಅವರು ಸಾಥ್ ನೀಡಿದ್ದರು.ಇದನ್ನೂ ಓದಿ: ಡಿಗ್ನಿಫೈಡ್ ರಾಜಕಾರಣಿ, ಬೆಂಗಳೂರು ನಂ.1 ಆಗಲು ಎಸ್‌ಎಂಕೆ ಕಾರಣ: ಸುಮಲತಾ