ಬೆಂಗಳೂರು: ಮಂಡ್ಯ ಜಿಲ್ಲೆಯ ಮೈಶುಗರ್ ಮತ್ತು ಪಿಎಸ್‍ಎಸ್‍ಕೆ ಕಾರ್ಖಾನೆಗಳನ್ನು ಪುನರ್ ಆರಂಭಿಸುವಂತೆ ಮನವಿ ಮಾಡಿ ಮಾಜಿ ಸಿಎಂ ಎಸ್‍ಎಂ ಕೃಷ್ಣ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ವಾರ್ಷಿಕ 40 ರಿಂದ 50 ಟನ್ ಕಬ್ಬು ಬೆಳೆಯಲಾಗುತ್ತದೆ. ಮಂಡ್ಯದಲ್ಲಿ ಉತ್ಪಾದನೆಯಾಗುವ ಸಂಪೂರ್ಣ ಕಬ್ಬನ್ನು ಅರೆಯುವ ಸಾಮರ್ಥ್ಯ ಈಗ ಇರುವ 3 ಕಾರ್ಖಾನೆಗಳಿಂದ ಆಗುತ್ತಿಲ್ಲ ಎಂದು ಪತ್ರದಲ್ಲಿ ಎಂಎಸ್‍ಕೆ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಸಿಎಂ ಮುಂದಿಟ್ಟಿದ್ದಾರೆ.
Advertisement
Advertisement
ಪತ್ರದಲ್ಲಿ ಏನಿದೆ?
ಮಂಡ್ಯ ಜಿಲ್ಲೆಯ ಮೈಶುಗರ್ ಮತ್ತು ಪಿಎಸ್‍ಎಸ್‍ಕೆ ಕಾರ್ಖಾನೆಗಳನ್ನು ಪುನರ್ ಆರಂಭಿಸಲು ಹಾಗೂ ಮಂಡ್ಯದಲ್ಲಿ ಏರಿಕೆಯಾಗಿರುವ ನೀರಿನ ದರದ ವಿರುದ್ಧ ವಿವಿಧ ಸಂಘಟನೆಗಳು ಅಮರಣಾಂತ ಉಪವಾಸ ಕೈಗೊಂಡಿರುವ ವಿಷಯ ತಿಳಿದು ನೋವುಂಟಾಗಿದೆ.
Advertisement
ಜಿಲ್ಲೆಯಲ್ಲಿ ಕಬ್ಬು ಪ್ರಮುಖ ಬೆಳೆಯಾಗಿದ್ದು, ಪ್ರತಿವರ್ಷ ಸುಮಾರು 40 ರಿಂದ 50 ಲಕ್ಷ ಟನ್ ಕಬ್ಬನ್ನು ಬೆಳೆಯಲಾಗುತ್ತಿದೆ. ಪ್ರಸ್ತುತ ಕೇವಲ 3 ಖಾಸಗಿ ಕಾರ್ಖಾನೆಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಆ ಕಾರ್ಖಾನೆಗಳಿಗೆ ಮಂಡ್ಯದಲ್ಲಿ ಉತ್ಪಾದನೆಯಾಗುತ್ತಿರುವ ಎಲ್ಲಾ ಕಬ್ಬನ್ನು ಅರೆಯುವ ಸಾಮಥ್ರ್ಯ ಇಲ್ಲದಿರುವುದರಿಂದ ಹೆಚ್ಚು ಕಬ್ಬನ್ನು ಅರೆಯುವ ಸಾಮಥ್ರ್ಯವುಳ್ಳ ಮೈಶುಗರ್ ಮತ್ತು ಪಿಎಸ್‍ಎಸ್‍ಕೆ ಕಾರ್ಖಾನೆಗಳನ್ನು ಪುನರ್ ಆರಂಭಿಸುವುದು ಅನಿವಾರ್ಯವಾಗಿದೆ. ಆದ್ದರಿಂದ ಸ್ಥಗಿತಗೊಂಡಿರುವ ಕಾರ್ಖಾನೆಗಳನ್ನು ಪುನರ್ ಆರಂಭಿಸಿ ಸಂಕಷ್ಟದಲ್ಲಿ ಮತ್ತು ಆತ್ಮಹತ್ಯೆ ಯೋಚನೆಯಲ್ಲಿರುವ ರೈತರನ್ನು ರಕ್ಷಿಸಲು ತುರ್ತು ಕ್ರಮ ಕೈಗೊಳ್ಳಬೇಕಾಗಿ ವಿನಂತಿಸುತ್ತೇನೆ ಎಂದು ಎಂಎಸ್ ಕೃಷ್ಣ ಅವರು ತಿಳಿಸಿದ್ದಾರೆ.