ಮಂಡ್ಯ: ದೇಶ ಕಂಡ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ (SM Krishna) ಅವರು ಸಕ್ಕರೆ ನಾಡು ಮಂಡ್ಯ (Mandya) ಜಿಲ್ಲೆಯಿಂದ ಆಯ್ಕೆಯಾದ ರಾಜ್ಯದ ಮೊದಲ ಹಾಗೂ ಏಕೈಕ ಮುಖ್ಯಮಂತ್ರಿಯಾದವರು. ಸತತ ಮೂರು ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ, ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, 2 ಬಾರಿ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದವರು. ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸ್ಪೀಕರ್, ಕೈಗಾರಿಕೆ, ವಾಣಿಜ್ಯ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಹಾಗೂ ಕೇಂದ್ರದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ, ಕೈಗಾರಿಕಾ ಹಾಗೂ ಹಣಕಾಸು ಖಾತೆಯ ಸಚಿವ, ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಭಾರತದ ಸದಸ್ಯ, ರಾಜ್ಯಪಾಲರಾಗಿ ಜವಾಬ್ದಾರಿ ನಿರ್ವಹಿಸಿದ ಕೃಷ್ಣ, ಅನೇಕ ಏಳು ಬೀಳುಗಳನ್ನ ಕಂಡವರು. ಈ ಕುರಿತ ಒಂದಿಷ್ಟು ಸ್ವಾರಸ್ಯಗಳು ಇಲ್ಲಿವೆ.
Advertisement
ರಾಜಕೀಯ ಏಳು-ಬೀಳು
ಎಸ್.ಎಂ.ಕೃಷ್ಣ ಅವರು 1962 ರಲ್ಲಿ ಪ್ರಥಮ ಬಾರಿಗೆ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯಿಂದ ಮದ್ದೂರು ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಮೊದಲ ಚುನಾವಣೆಯಲ್ಲಿ ಗೆಲ್ಲುವ ಮೂಲಕ ತಮ್ಮ ಜೀವನದಲ್ಲಿ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾದರು. ಆ ನಂತರ ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಪಕ್ಷಗಳಲ್ಲೂ ಹಲವು ಹುದ್ದೆಗಳನ್ನು ನಿರ್ವಹಿಸಿದರು.
Advertisement
ತಾವು ಎದುರಿಸಿದ 6 ವಿಧಾನಭಾ ಚುನಾವಣೆಗಳಲ್ಲಿ 4ರಲ್ಲಿ ಗೆಲುವು ಕಂಡು, 2ರಲ್ಲಿ ಸೋತಿದ್ದರು. 4 ಲೋಕಸಭಾ ಚುನಾವಣೆಗಳನ್ನು ಎದುರಿಸಿ 3 ಬಾರಿ ಗೆದ್ದಿದ್ದರು, ಒಮ್ಮೆ ಸೋಲಾಯಿತು. ಮದ್ದೂರು ಕ್ಷೇತ್ರದಿಂದ 3 ಬಾರಿ ಹಾಗೂ ಚಾಮರಾಜಪೇಟೆಯಿಂದ 1 ಬಾರಿ ಶಾಸಕರಾಗಿದ್ದರು. 3 ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದರು. ಅಷ್ಟೇ ಅಲ್ಲ ಒಂದು ಬಾರಿ ಎಂಎಲ್‌ಸಿ, 2 ಬಾರಿ ರಾಜ್ಯಸಭಾ ಸದಸ್ಯರಾಗಿದ್ದವರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಎರಡರಲ್ಲೂ ಮಹತ್ವದ ಹುದ್ದೆಗಳನ್ನು ನಿಭಾಯಿಸಿ ಸೈ ಎನಿಸಿಕೊಂಡಿದ್ದರು.
Advertisement
Advertisement
- ಎಸ್.ಎಂ.ಕೃಷ್ಣ ಅವರು 1962ರಲ್ಲಿ ಪ್ರಥಮ ಬಾರಿಗೆ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯಿಂದ ಮದ್ದೂರು ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಮೊದಲ ಚುನಾವಣೆಯಲ್ಲಿ ಗೆಲ್ಲುವ ಮೂಲಕ ತಮ್ಮ ಜೀವನದಲ್ಲಿ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾದರು.
- 1967ರ ವಿಧಾನಸಭಾ ಚುನಾವಣೆಯಲ್ಲಿ ಕೃಷ್ಣ ಅವರು ಮದ್ದೂರು ಕ್ಷೇತ್ರದಲ್ಲಿ ಸೋತರು.
- 1968ರ ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಸ್.ಎಂ ಕೃಷ್ಣ ಕಾಂಗ್ರೆಸ್ ವಿರುದ್ಧ ಪ್ರತಿಪಕ್ಷಗಳ ಸಂಯುಕ್ತ ಅಭ್ಯರ್ಥಿಯಾಗಿ ಕಣಕ್ಕಿಳಿದು ಭರ್ಜರಿ ಗೆಲುವು ಪಡೆಯುವ ಮೂಲಕ ಮೊದಲ ಬಾರಿಗೆ ಸಂಸತ್ ಸದಸ್ಯರಾಗಿ ಆಯ್ಕೆಯಾದರು.
- 1970ರಲ್ಲಿ ಕೃಷ್ಣ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
- 1971ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿ ಸತತ 2ನೇ ಬಾರಿಗೆ ಎಂಪಿ ಆದರು.
- ಬಳಿಕ 1972ರಲ್ಲಿ ಎಂಪಿ ಸ್ಥಾನಕ್ಕೆ ರಾಜಕೀನಾಮೆ ನೀಡಿ ಆಗಿನ ಸಿಎಂ ದೇವರಾಜು ಅವರ ಸರ್ಕಾರದಲ್ಲಿ ಎಂಎಲ್‌ಸಿಯಾಗಿ ಬಳಿಕ ಕೈಗಾರಿಕೆ, ವಾಣಿಜ್ಯ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಕೆಲಸ ಮಾಡಿದ್ದಾರೆ.
- 1980ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಎಸ್.ಎಂ.ಕೃಷ್ಣ ಅವರು ಸ್ಪರ್ಧೆ ಮಾಡಿ ಗೆಲುವು ಪಡೆಯುವ ಮೂಲಕ 3ನೇ ಬಾರಿಗೆ ಎಂಪಿ ಆದರು. ಆಗ ಇಂದಿರಾ ಗಾಂಧಿ ಅವರ ಸಂಪುಟದಲ್ಲಿ ಕೇಂದ್ರ ಕೈಗಾರಿಕಾ ಹಾಗೂ ಹಣಕಾಸು ಖಾತೆಯ ಸಚಿವರಾಗಿ ಕೆಲಸ ಮಾಡಿದರು.
- 1982ರಲ್ಲಿ ಭಾರತೀಯ ನಿಯೋಗದ ಸದಸ್ಯರಾಗಿ ಯೂರೋಪ್, ಅಮೆರಿಕ, ಜಪಾನ್, ಆಫ್ರಿಕಾ ಹಾಗೂ ನ್ಯೂಜಿಲ್ಯಾಂಡ್ ರಾಷ್ಟ್ರಗಳನ್ನು ಕೃಷ್ಣ ಅವರು ಪ್ರವಾಸ ಮಾಡಿದ್ದಾರೆ.
- 1984ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಕೃಷ್ಣ ಅವರನ್ನು ಕೆ.ವಿ ಶಂಕರೇಗೌಡರು ಸೋಲಿಸಿದರು.
- 1989ರ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿ ಗೆಲುವು ಪಡೆಯುವ ಮೂಲಕ ಎಸ್.ಎಂ ಕೃಷ್ಣ ಅವರು 2ನೇ ಬಾರಿಗೆ ಶಾಸಕರಾದರು. ಈ ವೇಳೆ ವಿಧಾನಸಭೆಯ ಸ್ಪೀಕರ್ ಆಗಿಯೂ ಕಾರ್ಯನಿರ್ವಹಿಸಿದರು.
- 1990ರ ಕಾಮನ್‌ವೆಲ್ತ್ ಪಾರ್ಲಿಮೆಂಟರಿ ವಿಚಾರಗೋಷ್ಠಿಯಲ್ಲಿ ಭಾರತ ನಿಯೋಗದ ಸದಸ್ಯರಾಗಿ ಭಾಗವಹಿಸಿದ್ದರು.
- 1993 ರಿಂದ 1994ರ ವರಗೆ ರಾಜ್ಯದ ಉಪಮುಖ್ಯಮಂತ್ರಿಯಾಗಿ ಎಸ್.ಎಂ ಕೃಷ್ಣ ಅವರು ಸೇವೆ ಸಲ್ಲಿಸಿದ್ದಾರೆ.
- 1995ರ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಎಸ್.ಎಂ ಕೃಷ್ಣ ಅವರು ಸೋಲು ಅನುಭವಿಸಬೇಕಾಯಿತು. ಆ ವೇಳೆ ರಾಜಕೀಯದಲ್ಲಿ ಉನ್ನತ ಮಟ್ಟದಲ್ಲಿದ್ದ ಕೃಷ್ಣ ಅವರ ಸೋಲು ವ್ಯಾಪಕ ಚರ್ಚೆಗೆ ಸಹ ಕಾರಣವಾಯಿತು.
- ನಂತರ 1996ರಲ್ಲಿ ಕೃಷ್ಣ ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದರು. 1999ರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದರು.
- 1999ರಲ್ಲಿ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಎಸ್.ಎಂ.ಕೃಷ್ಣ ಅವರು ಮುನ್ನೆಡಸಿದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 132 ಸೀಟುಗಳನ್ನು ಗೆದ್ದು ಅಧಿಕಾರದ ಗದ್ದುಗೆ ಹಿಡಿಯಿತು.
- ಈ ವೇಳೆ ಮದ್ದೂರು ಕ್ಷೇತ್ರದಿಂದ ಗೆಲುವು ಸಾಧಿಸಿದ ಎಸ್.ಎಂ.ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದರು. ಈ ಮೂಲಕ ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಮೊದಲ ನಾಯಕ ಸಿಎಂ ಆಗಿರುವ ಹೆಗ್ಗಳಿಕೆಗೆ ಕೃಷ್ಣ ಅವರು ಪಾತ್ರರಾಗಿದ್ದಾರೆ.