ಮೈಸೂರು: ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ(SM Krishna) ಅವರಿಗೆ ಮೈಸೂರು ವಿಶ್ವವಿದ್ಯಾನಿಲಯ (Mysore University) ತನ್ನ 104ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿದೆ.
ಸುದರ್ಶನ ನರಸಿಂಹ ಕ್ಷೇತ್ರದ ಪೀಠಾಧಿಪತಿ ಭಾಷ್ಯಂ ಸ್ವಾಮೀಜಿ ಹಾಗೂ ಬೆಂಗಳೂರಿನ ಗೋಕುಲ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಎಂ.ಆರ್.ಸೀತಾರಾಮ್ ಅವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ – ಪ್ರತೀ ಕ್ಷೇತ್ರಕ್ಕೆ ತಲಾ 10 ಕೋಟಿ ಬಿಡುಗಡೆ: ಡಿಕೆಶಿ
Advertisement
Advertisement
ಘಟಿಕೋತ್ಸವದಲ್ಲಿ 32,249 ವಿದ್ಯಾರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಯಿತು. ವಿವಿಧ ವಿಷಯಗಳಲ್ಲಿ 100ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳಿಗೆ ಪಿಹೆಚ್ಡಿ ಪದವಿ ಪ್ರದಾನ ಮಾಡಲಾಯಿತು. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಸಿಲ್ಲಿ ಪ್ರಕರಣ: ಶರಣ ಪ್ರಕಾಶ್ ಪಾಟೀಲ್
Advertisement
ಘಟಿಕೋತ್ಸವದಲ್ಲಿ 436 ಪದಕಗಳು, 266 ಬಹುಮಾನಗಳನ್ನು 252 ಮಂದಿ ವಿದ್ಯಾರ್ಥಿಗಳಿಗೆ ಪ್ರದಾನ ಮಾಡಲಾಗುವುದು. ಇದರ ಜೊತೆಗೆ 6,144 ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಗುವುದು ಹಾಗೂ 26,009 ಮಂದಿ ವಿದ್ಯಾರ್ಥಿಗಳಿಗೆ ಸ್ನಾತಕ ಪದವಿ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಮಾಹಿತಿ ನೀಡಿದ್ದರು.