ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಹೊರಬಂದಿರುವ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಮಾರ್ಚ್ 13ರಂದು ದೆಹಲಿಗೆ ದೌಡಾಯಿಸಲಿದ್ದಾರೆ.
ಎಸ್‍ಎಂ ಕೃಷ್ಣ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರನ್ನು ಭೇಟಿ ಮಾಡಲಿದ್ದು, ಬಿಜೆಪಿ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ. ಅಮಿತ್ ಷಾ ಮಾತುಕತೆ ವೇಳೆ ಬಿಜೆಪಿ ಸೇರ್ಪಡೆಗೆ ಅಂತಿಮ ದಿನಾಂಕ ನಿರ್ಧಾರವಾಗಲಿದ್ದು, ಬಹುತೇಕ ಮಾರ್ಚ್ 17 ರಂದು ದೆಹಲಿಯಲ್ಲೇ ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಎಸ್‍ಎಂಕೆ ಬಿಜೆಪಿ ಸೇರ್ಪಡೆ ಸಾಧ್ಯತೆ ಇದೆ ಎನ್ನಲಾಗಿದೆ.
Advertisement
ಬಿಜೆಪಿ ಸೇರ್ಪಡೆ ನಂತರ ರಾಜ್ಯದಲ್ಲಿ ಬೃಹತ್ ಸಮಾವೇಶ ನಡೆಸಲು ಎಸ್‍ಎಂ.ಕೃಷ್ಣ ಚಿಂತನೆ ನಡೆಸಿದ್ದಾರೆ. ನಂತರ ತಮ್ಮ ಬೆಂಬಲಿಗರನ್ನೂ ಎಸ್.ಎಂ.ಕೃಷ್ಣ ಬಿಜೆಪಿಗೆ ಕರೆತರಲಿದ್ದಾರೆ ಎಂದು ಹೇಳಲಾಗುತ್ತಿದೆ.
Advertisement
Advertisement
ಸೋಮವಾರದಂದು ಬೆಂಗಳೂರಿನ ಸದಾಶಿವನಗರದ ಕೃಷ್ಣ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಮಾಜಿ ಡಿಸಿಎಂ ಆರ್.ಅಶೋಕ್ ಭೇಟಿ ನೀಡಿ ಬಿಜೆಪಿ ಸೇರ್ಪಡೆಗೆ ಅಧಿಕೃತ ಆಹ್ವಾನ ನೀಡಿದ್ದರು. ಯಡಿಯೂರಪ್ಪ, ಎಸ್‍ಎಂಕೆ ಜೊತೆ ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದ್ರು.
Advertisement
ಎಸ್‍ಎಂಕೆ ಭೇಟಿ ಬಳಿಕ ಮಾತನಾಡಿದ ಬಿಎಸ್‍ವೈ, ಎಸ್.ಎಂ ಕೃಷ್ಣ ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ ತಕ್ಷಣ ಬಿಜೆಪಿಗೆ ಬರುವಂತೆ ಮನವಿ ಮಾಡಿದ್ದೆವು. ಈಗ ಮತ್ತೆ ಕೃಷ್ಣ ಅವರಿಗೆ ಬಿಜೆಪಿಗೆ ಬರುವಂತೆ ಆಹ್ವಾನ ನೀಡಿದ್ದೇವೆ. ಆದಷ್ಟು ಬೇಗ ಅವರು ಬಿಜೆಪಿ ಸೇರುವ ವಿಶ್ವಾಸವಿದೆ ಎಂದು ಹೇಳಿದ್ದರು.