ಮನೆಗೆ ಡಿಕ್ಕಿ ಹೊಡೆದು ಸಣ್ಣ ವಿಮಾನ ಪತನ – ಪೈಲಟ್‌ ಸಾವು

Public TV
1 Min Read
Small Plane Crashes In California

ವಾಷಿಂಗ್ಟನ್‌: ಸಿಮಿ ಕಣಿವೆಯ ಬಳಿ ಸಣ್ಣ ವಿಮಾನವೊಂದು ಪತನಗೊಂಡಿದ್ದು, ಪೈಲಟ್‌ ಸಾವಿಗೀಡಾಗಿರುವ ಘಟನೆ ನಡೆದಿದೆ. ಅವಘಡದಲ್ಲಿ 2 ಮನೆಗಳಿಗೆ ಹಾನಿಯಾಗಿದೆ.

ಲಾಸ್ ಏಂಜಲೀಸ್‌ನ ವಾಯುವ್ಯಕ್ಕೆ ಸುಮಾರು 80.47 ಕಿಲೋಮೀಟರ್ ದೂರದಲ್ಲಿರುವ ಸಿಮಿ ಕಣಿವೆಯ ವುಡ್ ರಾಂಚ್ ವಿಭಾಗದ ಒಂದು ಮನೆಯ ಛಾವಣಿಯಿಂದ ಹೊಗೆ ಬರುತ್ತಿರುವುದು ಕಂಡುಬಂದಿತ್ತು. ಅಲ್ಲಿ ಪರಿಶೀಲಿಸಿದಾಗ ವಿಮಾನ ಪತನಗೊಂಡಿರುವುದು ಗೊತ್ತಾಯಿತು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 2ನೇ ಬಾರಿಗೆ ಆಸ್ಟ್ರೇಲಿಯಾ ಪ್ರಧಾನಿಯಾಗಿ ಅಲ್ಬನೀಸ್‌ ಆಯ್ಕೆ – ಮೋದಿ ವಿಶ್‌

ಎರಡು ಮನೆಗಳಲ್ಲಿ ವಿಮಾನದ ಅವಶೇಷಗಳು ಬಿದ್ದಿವೆ. ನಿವಾಸಿಗಳು ಎರಡೂ ಮನೆಗಳ ಒಳಗೆ ಇದ್ದರು. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮನೆಯಲ್ಲಿದ್ದ ಜನರನ್ನು ಸ್ಥಳಾಂತರಿಸಲಾಗಿದೆ. ಎರಡೂ ಮನೆಗಳಿಗೆ ಹಾನಿಯಾಗಿದೆ. ವಿಮಾನ ಅಪಘಾತಕ್ಕೀಡಾಗುತ್ತಿದ್ದಂತೆ ಬೆಂಕಿ ಹೊತ್ತಿ ಉರಿದಿತ್ತು.

ಸುಮಾರು 40 ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಮನೆ ದುರಸ್ತಿ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಇದನ್ನೂ ಓದಿ: ಚೆನ್ನೈಗೆ ಬಂದು ಶ್ರೀಲಂಕಾಗೆ ಹೋದ್ರಾ ಪಹಲ್ಗಾಮ್ ಉಗ್ರರು? – ಶ್ರೀಲಂಕಾ ಏರ್‌ಪೋರ್ಟಲ್ಲಿ ತಪಾಸಣೆ

Share This Article