-ಸ್ಮಾರ್ಟ್ ಸಿಟಿ ಇಂಜಿನಿಯರ್ ವಿರುದ್ದ ಅರಣ್ಯ ಇಲಾಖೆಯಲ್ಲಿ ದೂರು
ಶಿವಮೊಗ್ಗ: ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯ ವೇಳೆ ನಾಗರ ಹಾವನ್ನು ಕೊಂದು ಹಾಕಲಾಗಿದೆ ಎಂದು ಆರೋಪಿಸಿ ಸ್ಮಾರ್ಟ್ ಸಿಟಿ ಇಂಜಿನಿಯರ್ ವಿರುದ್ಧ ದೂರು ದಾಖಲಾಗಿದೆ.
Advertisement
ಡಿಸೆಂಬರ್ 4ರಂದು ಶಿವಮೊಗ್ಗದ ಸಾಗರ ರಸ್ತೆಯ ಎಪಿಎಂಸಿ ಮಾರುಕಟ್ಟೆ ಮುಂಭಾಗ ಆಂಜನೇಯ ದೇವಸ್ಥಾನವನ್ನು ಜೆಸಿಬಿಯಿಂದ ನೆಲಸಮ ಮಾಡಲಾಗಿತ್ತು. ಆಂಜನೇಯ ದೇವಸ್ಥಾನ ತೆರವು ಮಾಡುವ ವೇಳೆ ಹಾವೊಂದು ಪ್ರತ್ಯಕ್ಷವಾಗಿತ್ತು. ಈ ವೇಳೆ ಹಾವು ದೇವಸ್ಥಾನ ತೆರವಿಗೆ ಅಡ್ಡಿಪಡಿಸಿದೆ. ನಂತರ ಜೆಸಿಬಿಯಿಂದ ಹಾವನ್ನು ಹತ್ಯೆ ಮಾಡಲಾಗಿತ್ತು. ಇದನ್ನೂ ಓದಿ: ಪತ್ನಿಯನ್ನು ಹತೈಗೈದ ಪತಿಗೆ ಜೀವಾವಧಿ ಶಿಕ್ಷೆ – ಎರಡು ಲಕ್ಷ ದಂಡ
Advertisement
Advertisement
ದೇವಸ್ಥಾನ ತೆರವು ಮಾಡಿದ ನಂತರ ಅಂದೇ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಹಾವನ್ನು ಸ್ಮಾರ್ಟ್ ಸಿಟಿ ಯೋಜನೆಯವರು ಕೊಂದಿದ್ದಾರೆ ಎಂದು ಪಾಲಿಕೆಯ ಸದಸ್ಯ ರಾಹುಲ್ ಬಿದರೆ, ಆಲ್ಕೊಳದ ಶಂಕರ್ ವಲಯದ ಅರಣ್ಯಾಧಿಕಾರಿಗಳಿಗೆ ಸ್ಮಾರ್ಟ್ ಸಿಟಿ ಇಂಜಿನಿಯರ್ ವಿಜಯ ಕುಮಾರ್ ವಿರುದ್ಧ ಹಾವು ಕೊಂದಿರುವ ಬಗ್ಗೆ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಟೊಮೆಟೊ ಕದ್ದ ಖಾಕಿ ಸಮವಸ್ತ್ರಧಾರಿ – ವೀಡಿಯೋ ವೈರಲ್
Advertisement