ಮೈಸೂರು: ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ (Varuna Constituency) ಮೊಟ್ಟ ಮೊದಲ ಬಾರಿಗೆ ಸಿದ್ದರಾಮಯ್ಯ (Siddaramaiah) ಕುಟುಂಬದಿಂದ ಮಹಿಳೆಯರು ಪ್ರಚಾರಕ್ಕಿಳಿದಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಪರ ತಮ್ಮ ಸೊಸೆ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.
ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಸೊಸೆ ಸ್ಮಿತಾ ರಾಕೇಶ್ ಸಿದ್ದರಾಮಯ್ಯ (Smita Rakesh Siddaramaiah) ಅವರು, ಮನೆ ಮನೆಗೆ ತೆರಳಿ ಮತಯಾಚಿಸಿದ್ದಾರೆ. ಇದೇ ವೇಳೆ ಈ ಬಾರಿ ಅತಿಹೆಚ್ಚು ಮತಗಳಿಂದ ಮಾವನವರನ್ನ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕುಡಿಯಲು ಹಣ ಕೊಡದಿದ್ದಕ್ಕೆ ಇಟ್ಟಿಗೆಯಿಂದ ತಲೆಗೆ ಹೊಡೆದು ತಂದೆಯನ್ನೇ ಕೊಂದ ಪಾಪಿ ಮಗ
ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಪರ ನಟಿ ರಮ್ಯಾ (Ramya) ಹಾಗೂ ನಟ ದುನಿಯಾ ವಿಜಯ್ (Duniya Vijay) ವರುಣಾ ಕ್ಷೇತ್ರದಲ್ಲಿ ಪ್ರಚಾರ ನಡೆಸುವುದಾಗಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ನಡುವೆ ತಾವೂ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದು, ಅತ್ಯಧಿಕ ಮತಗಳಿಂದ ಸಿದ್ದರಾಮಯ್ಯ ಅವರು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚುನಾವಣೆಗೆ ಅಣಿಗೊಳಿಸಲು ಮೋದಿ ರಣತಂತ್ರ – 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ
ಕಳೆದ ಎರಡು ದಿನಗಳ ಹಿಂದೆಯಷ್ಟೇ ಈ ಕುರಿತು `ಪಬ್ಲಿಕ್ ಟಿವಿ’ಯೊಂದಿಗೆ ಮಾತನಾಡಿದ್ದ ಶಾಸಕ ಯತೀಂದ್ರ ಸಿದ್ದರಾಮಯ್ಯ, ಬಿಜೆಪಿಯವರಿಗೆ ನನ್ನ ತಂದೆ ಕೊಟ್ಟ ಆಡಳಿತದಲ್ಲಿ ತಪ್ಪು ಹುಡುಕಲಾಗುತ್ತಿಲ್ಲ, ಅವರ ಪ್ರಾಮಾಣಿಕತೆ ಬಗ್ಗೆ ಪ್ರಶ್ನೆ ಮಾಡೋಕೆ ಆಗ್ತಿಲ್ಲ. ಹಾಗಾಗಿ ಜಾತಿ ವಿರೋಧಿ ಹಣೆಪಟ್ಟಿ ಕಟ್ಟುವ ಪ್ರಯತ್ನ ಮಾಡ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಲಿಂಗಾಯತ ವಿರೋಧಿ ಪಟ್ಟ ಕಟ್ಟುವ ಪ್ರಯತ್ನವನ್ನ ಬಿಜೆಪಿ ಮಾಡ್ತಿದೆ. ಅದು ಯಶಸ್ವಿಯಾಗಲ್ಲ ಎಂದು ಹೇಳಿದ್ದರು.