– ಹೈದ್ರಾಬಾದ್‌ಗೆ ಡೈವರ್ಟ್
ನವದೆಹಲಿ: ದೆಹಲಿಯಿಂದ ಚೆನ್ನೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ (Indigo Airline) ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಪರಿಣಾಮ ಚೆನ್ನೈಗೆ ತೆರಳಬೇಕಿದ್ದ ವಿಮಾನವನ್ನ ಹೈದರಾಬಾದ್‌ಗೆ ಡೈವರ್ಟ್ ಮಾಡಲಾಗಿದೆ.
6E 6115 ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಓವರ್‌ಹೆಡ್ ಬಿನ್‌ನಲ್ಲಿ ಇರಿಸಿದ್ದ ಎಲೆಕ್ಟ್ರಾನಿಕ್ ಸಾಧನಕ್ಕೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ನಂತರ ಕ್ಷಣಾರ್ಧದಲ್ಲೇ ಸುತ್ತಲೂ ದಟ್ಟ ಹೊಗೆ ಆವರಿಸಿದೆ. ತಕ್ಷಣ ಕ್ಯಾಬಿನ್ ಸಿಬ್ಬಂದಿ ಅಪಾಯದ ಬಗ್ಗೆ ತಿಳಿಸಿದ್ದಾರೆ. ಪ್ರಯಾಣಿಕರು ಗಾಬರಿಗೊಂಡು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ.
ಪೈಲಟ್ ಕೂಡಲೇ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಹತ್ತಿರದ ನಿಲ್ದಾಣದಲ್ಲಿ ಲ್ಯಾಂಡಿಂಗ್‌ಗೆ ಮುಂದಾಗಿದ್ದಾರೆ. ವಿಮಾನವನ್ನ ತಕ್ಷಣವೇ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಡೈವರ್ಟ್ ಮಾಡಿದ್ದಾರೆ.ಇದನ್ನೂ ಓದಿ: ಅಂಬಾಭವಾನಿ ಘಟಸ್ಥಾಪನೆ – ರಾಯಚೂರಿನಲ್ಲಿ ನವರಾತ್ರಿ ಉತ್ಸವಕ್ಕೆ ಅದ್ಧೂರಿ ಚಾಲನೆ
ಘಟನೆಯಿಂದ ಯಾರಿಗೂ ತೊಂದರೆಯಾಗಿಲ್ಲ. ಪ್ರಯಾಣಿಕರನ್ನ ಚೆನ್ನೈಗೆ ಕರೆದೊಯ್ಯಲು ಪರ್ಯಾಯ ವಿಮಾನ ವ್ಯವಸ್ಥೆ ಮಾಡಲಾಗಿದೆ ಎಂದು ಇಂಡಿಗೋ ಏರ್‌ಲೈನ್ ಸಂಸ್ಥೆ ತಿಳಿಸಿದೆ.ಇದನ್ನೂ ಓದಿ: ದೇಶದಲ್ಲೇ ಹಾವು ಕಡಿತ ಪ್ರಕರಣದಲ್ಲಿ ಕರ್ನಾಟಕ ಮುಂಚೂಣಿ

