ನವದೆಹಲಿ: ಜವಳಿ ಸಚಿವೆ ಸ್ಮೃತಿ ಇರಾನಿ ಅವರಿಗೆ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ ಎಂದು ಸರ್ಕಾರ ಇಂದು ಘೋಷಿಸಿದೆ.
Advertisement
ಹಿರಿಯ ಬಿಜೆಪಿ ನಾಯಕ ಎಂ ವೆಂಕಯ್ಯ ನಾಯ್ಡು ಅವರು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ನಾಮಾಂಕಿತರಾಗಿರುವ ಹಿನ್ನೆಲೆಯಲ್ಲಿ ಅವರು ನಿರ್ವಹಿಸುತ್ತಿದ್ದ ವಾರ್ತಾ ಮತ್ತು ಪ್ರಸಾರ ಸಚಿವ ಸ್ಥಾನಕ್ಕೆ ಸೋಮವಾರದಂದು ರಾಜೀನಾಮೆ ನೀಡಿದ್ದರು. ಅಲ್ಲದೆ ಅವರು ನಗರಾಭಿವೃದ್ಧಿ ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.
Advertisement
ಈ ಹಿನ್ನೆಲೆಯಲ್ಲಿ ಸದ್ಯ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಜವಾಬ್ದಾರಿಯನ್ನು ಸಚಿವೆ ಸ್ಮೃತಿ ಇರಾನಿಗೆ ನೀಡಲಾಗಿದೆ. ನಗರಾಭಿವೃದ್ಧಿ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ನರೇಂದ್ರ ಸಿಂಗ್ ತೋಮರ್ ಅವರಿಗೆ ನೀಡಲಾಗಿದೆ. ಈ ಬಗ್ಗೆ ಪ್ರಧಾನಿ ಸಚಿವಾಲಯ ಟ್ವಿಟ್ಟರ್‍ನಲ್ಲಿ ತಿಳಿಸಿದೆ.
Advertisement
Advertisement
ತೋಮರ್ ಅವರು ಸದ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾಗಿದ್ದಾರೆ.
The additional charge of the Ministry of I&B has been given to @smritiirani.
— PMO India (@PMOIndia) July 18, 2017
Shri @MVenkaiahNaidu has resigned from his ministerial responsibilities. Additional charge of @Moud_India has been given to Shri @nstomar.
— PMO India (@PMOIndia) July 18, 2017