ನವದೆಹಲಿ: ‘ಪೀರಿಯೆಡ್ ಲೀವ್’ ನೀಡುವ ಕುರಿತ ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani) ಹೇಳಿಕೆಯನ್ನು ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಬೆಂಬಲಿಸಿದ್ದಾರೆ.
ಇರಾನಿ ಹೇಳಿಕೆಯನ್ನು ತಮ್ಮ ಇನ್ ಸ್ಟಾ ಸ್ಟೋರಿಯಲ್ಲಿ ಹಾಕಿಕೊಂಡಿರುವ ನಟಿ, ಮನುಕುಲದ ಇತಿಹಾಸದಲ್ಲಿ ದುಡಿಯದ ಮಹಿಳೆ ಇಲ್ಲವೇ ಇಲ್ಲ. ವ್ಯವಸಾಯದಿಂದ ಹಿಡಿದು ಮನೆ ಕೆಲಸ, ಮಕ್ಕಳನ್ನು ಬೆಳೆಸುವವರೆಗೆ ಹೀಗೆ ಪ್ರತಿ ದಿನ ಕೆಲಸ ಮಾಡುತ್ತಲೇ ಇರುತ್ತಾರೆ. ಕುಟುಂಬ ಸಮುದಾಯ ಅಥವಾ ರಾಷ್ಟ್ರದ ಮೇಲಿನ ಅವರ ಬದ್ಧತೆಗೆ ಯಾವ ವಿಚಾರಗಳು ಅಡ್ಡಿಯಾಗುವುದಿಲ್ಲ. ಹೀಗಾಗಿ ಪೀರಿಯೆಡ್ ಸಮಯದಲ್ಲಿ ಮಹಿಳೆಯರಿಗೆ ರಜೆಯ ಅವಶ್ಯಕತೆ ಇಲ್ಲ. ಇದು ಋತುಚಕ್ರವೇ ಹೊರತು ರೋಗ ಅಥವಾ ಅಂಗವಿಕಲತೆ ಅಲ್ಲ ಎಂಬುದನ್ನು ದಯವಿಟ್ಟು ಅರ್ಥ ಮಾಡಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.
ಸ್ಮೃತಿ ಇರಾನಿ ಹೇಳಿದ್ದೇನು..?: ಗುರುವಾರ ರಾಜ್ಯ ಸಭೆಯಲ್ಲಿ ಸಚಿವೆ ಸ್ಮೃತಿ ಇರಾನಿಯವರು ಪೀರಿಯೆಡ್ ಲೀವ್ (Period Leave) ಕುರಿತು ಚರ್ಚೆ ನಡೆಸಿದರು. ಹೀಗೆ ಮಾತನಾಡುತ್ತಾ ಋತುಚಕ್ರ ಮಹಿಳೆಯರ ಜೀವನದ ನೈಸರ್ಗಿಕ ಭಾಗ. ಇದು ಅಂಗವಿಕಲತೆ ಎಂದು ಪರಿಗಣಿಸಬಾರದು ಎಂಬುದಾಗಿ ಪ್ರಸ್ತಾಪ ಮಾಡಿದರು. ಇದನ್ನೂ ಓದಿ: ಸಂಸತ್ ಮೇಲಿನ ದಾಳಿಯ ಪ್ರಮುಖ ರೂವಾರಿ ಲಲಿತ್ ಝಾ 7 ದಿನ ಪೊಲೀಸ್ ಕಸ್ಟಡಿಗೆ
10ರಿಂದ 19 ವರ್ಷ ವಯಸ್ಸಿನ ಹೆಣ್ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಮಾಡಿರುವ ‘ಋತುಚಕ್ರ ನೈರ್ಮಲ್ಯ ನಿರ್ವಹಣೆ’ ಯೋಜನೆಯನ್ನು ಇದೇ ವೇಳೆ ಸಚಿವೆ ಎತ್ತಿ ಹಿಡಿದರು.