ನವದೆಹಲಿ: ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು (ministry of minority affairs) ರದ್ದುಗೊಳಿಸುವ ಯಾವುದೇ ಪ್ರಸ್ತಾವನೆಯು ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಕೇಂದ್ರ ಸರ್ಕಾರವು (Central Government) ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಪಡಿಸಿ, ಅದನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದೊಂದಿಗೆ ವಿಲೀನಗೊಳಿಸುವ ಸಾಧ್ಯತೆಯಿದೆ ಎಂದು ಮಧ್ಯಮವೊಂದು ವರದಿ ಮಾಡಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ (Smriti Irani) ರೀ ಟ್ವೀಟ್ (ReTweet) ಮಾಡಿ ಸ್ಪಷ್ಟ ಪಡಿಸಿದರು.
Advertisement
A media report published in @DeccanHerald is claiming that the Central government is likely to scrap the Ministry of Minority Affairs and will merge it with @MSJEGOI#PIBFactCheck
▶️ This Claim is #FAKE
▶️ No such Proposal is under consideration pic.twitter.com/RcTtyzyw59
— PIB Fact Check (@PIBFactCheck) October 3, 2022
Advertisement
ಟ್ವೀಟ್‍ನಲ್ಲಿ ಏನಿದೆ?: ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವನೆಯು ಪರಿಗಣನೆಯಲ್ಲಿಲ್ಲ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಟ್ವೀಟ್‍ನಲ್ಲಿ ಸ್ಪಷ್ಟಪಡಿಸಿದೆ. ಈ ಟ್ವೀಟ್‍ನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ರೀಟ್ವೀಟ್ ಮಾಡಿದ್ದಾರೆ.